ಉಡುಪಿ : ತಂಬಾಕು ಉತ್ಪನ್ನಗಳ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ತಿಳಿದಿದ್ದರೂ ಸಹ ಅವುಗಳ ಬಳಕೆ ಮಾಡುವುದರೊಂದಿಗೆ ವ್ಯಸನಿಗಳಾಗುತ್ತಿದ್ದಾರೆ. ಇವುಗಳನ್ನು ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಇಂದು ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಂಬಾಕು ಉತ್ಪನ್ನಗಳ ಸೇವನೆಯಿಂದ ಮಾನವನಿಗೆ ಅಸಾಂಕ್ರಾಮಿಕ ಕಾಯಿಲೆಗಳಾದ ಕ್ಯಾನ್ಸರ್, ಹೃದಯ ಸಂಬAಧಿ ಹಾಗೂ ಶ್ವಾಸಕೋಶ ಸಂಬAಧ ಕಾಯಿಲೆಗಳು ಬರುತ್ತವೆ. ಅವು ಮುಂದಿನ ದಿನಗಳಲ್ಲಿ ಉಲ್ಬಣಗೊಂಡು ವ್ಯಕ್ತಿ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಂಬಾಕು ಉತ್ಪನ್ನಗಳ ಬಳಕೆಯಿಂದ ದೂರವಿರಬೇಕು ಎಂದರು.
ಮಣಿಪಾಲದ ಕೆಎಂಸಿ ಸಮುದಾಯದ ವೈದ್ಯಕೀಯ ವಿಭಾಗ ನಡೆಸಿದ ಸಮೀಕ್ಷೆ ವರದಿಯ ಪ್ರಕಾರ ಮೀನುಗಾರರಲ್ಲಿ ಶೇ.80 ರಷ್ಟು ಮೀನುಗಾರರು ತಂಬಾಕು ಉತ್ಪನ್ನಗಳ ವ್ಯಸನರಾಗಿದ್ದಾರೆ. ಅವರುಗಳು ಸಹ ಇದರ ಬಳಕೆಯಿಂದ ತಮ್ಮ ಆರೋಗ್ಯದ ಮೇಲೆ ಪ್ರತಿಕೂಲವಾಗುತ್ತದೆ ಎಂದು ತಿಳಿದಿದ್ದರೂ ಸಹ ಅವುಗಳ ಬಳಕೆ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ತಂಬಾಕು ಉತ್ಪನ್ನಗಳ ಬಳಕೆಯ ತಂತ್ರಕ್ಕೆ, ಪ್ರತಿತಂತ್ರಗಳ ಅಭಿಯಾನ ಮತ್ತು ಅದರಿಂದ ದೂರವಿರಲು ಹೆಚ್ಚಿನ ಮಾಹಿತಿಗಳನ್ನು ಮೀನುಗಾರರಿಗೆ ನೀಡಿ ಮನವರಿಕೆ ಮಾಡಬೇಕು ಎಂದರು.
ತಂಬಾಕು ಮುಕ್ತ ವಲಯಗಳೆಂದು ಪಡುಬಿದ್ರೆಯ ಬ್ಲೂ ಫ್ಲಾö್ಯಗ್ ಬೀಚ್, ಮರವಂತೆ, ಕೋಡಿಬೆಂಗ್ರೆ, ವಿನಾಯಕ್‌ಕೋಡಿ, ಗಂಗೊಳ್ಳಿ ಬೀಚ್‌ಗಳಲ್ಲಿ ಹೋರ್ಡಿಂಗ್ಸ್ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.ಜಿಲ್ಲೆಯಲ್ಲಿ ಈವರೆಗೆ ವಿವಿಧೆಡೆ ಕೋಟ್ಪಾ ನಿಯಂತ್ರಣ ತನಿಖಾ ದಳದ ವತಿಯಿಂದ ದಾಳಿ ನಡೆಸಿ, 224 ಪ್ರಕರಣಗಳನ್ನು ದಾಖಲಿಸಿಕೊಂಡು 49,850 ರೂ. ದಂಡವನ್ನು ವಸೂಲಿ ಮಾಡಲಾಗಿದೆ ಎಂದರು.
ಸರ್ಕಾರಿ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿಗಳೆಂದು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಘೋಷಣೆಯನ್ನು ಕಚೇರಿಯ ಮುಖ್ಯಸ್ಥರು ಮಾಡಬೇಕು ಎಂದರು.
ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ತಂಬಾಕು ಮುಕ್ತ ಹಳ್ಳಿಯನ್ನಾಗಿ ಮಾಡುವ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದ ಅವರು ಶಿಕ್ಷಣ ಸಂಸ್ಥೆಗಳ 100 ಗಜದ ಒಳಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ತಂಬಾಕು ಮುಕ್ತವನ್ನಾಗಿಸಲು ಮುಂದಾಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ. ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್ ಹಾಗೂ ಮತ್ತಿತರ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…