Featured

ಉಡುಪಿ : ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ – vishwanews24

ಉಡುಪಿ : ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

  ಉಡುಪಿ :  ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿದಾರರು ಐಇ–೫ ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಸಾಕಷ್ಟು  ಮುಂಚಿತವಾಗಿ ಂಇ–೫ ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆಯನ್ನು ನೀಡುವ ಬಗ್ಗೆ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

 ಸ್ಫೋಟಕ ಕಾಯಿದೆ ಮತ್ತು ನಿಯಮ ೨೦೦೮ ರ ಶೆಡ್ಯೂಲ್-Iಗಿ ರಡಿಯಲ್ಲಿ ಜಿಲ್ಲಾ ವ್ಯಾಪ್ತಿಯ ಈಗಾಗಲೇ ಸಮಿತಿಯು ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ, ಅರ್ಜಿಗಳನ್ನು ಜಿಲ್ಲಾಧಿಕಾರಿಯವರ ಕಚೇರಿಯಿಂದ ಅಥವಾ ಆನ್‌ಲೈನ್ ಐSಆಂ Poಡಿಣಚಿಟ ನಲ್ಲಿ ಪಡೆದು ಅಕ್ಟೋಬರ್ ೧೦ ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ೩೦೦ ರೂ. ಪರಿಶೀಲನಾ ಶುಲ್ಕವನ್ನು ಹಾಗೂ ಪರವಾನಿಗೆ ಮಂಜೂರು ಮಾಡುವ ಸಂದರ್ಭದಲ್ಲಿ ೬೦೦ ರೂ. ಪರವಾನಿಗೆ ಶುಲ್ಕವನ್ನು ಪಾವತಿಸಬೇಕು.

 ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಂಇ–೫ ರಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ ನೀಲಿ ನಕ್ಷೆ, ಅರ್ಜಿದಾರರ ಭಾವಚಿತ್ರ, ಪ್ರಸ್ತಾಪಿತ ಜಮೀನಿನ ಪಹಣಿ, ಖಾಸಗಿ ಜಮೀನಾಗಿದ್ದಲ್ಲಿ ಜಮೀನಿನ ಮಾಲಕರ ಒಪ್ಪಿಗೆ ಪತ್ರ (೧೦೦ ರೂ.ಸ್ಟಾಂಪ್ ಪೇಪರ್), ಸರಕಾರ ಜಾಗವಾಗಿದ್ದಲ್ಲಿ ಜಮೀನು ಯಾವ ಇಲಾಖೆಯ ಸುಪರ್ದಿಯಲ್ಲಿದೆಯೋ ಆ ಇಲಾಖೆಯ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು. 

   ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಅಗ್ನಿಶಾಮಕ ಇಲಾಖೆ, ಪೊಲೀಸ್ ಇಲಾಖೆ, ತಹಶೀಲ್ದಾರರ ಹಾಗೂ ಸಂಬAಧಪಟ್ಟ ಸ್ಥಳೀಯ ಸಂಸ್ಥೆಗಳಿAದ ಪಡೆದ ನಿರಾಕ್ಷೇಪಣಾ ಪತ್ರಗಳನ್ನು ಂಇ–೫ ನಮೂನೆ, ಪ್ರಸ್ತಾವಿತ ಜಮೀನಿನ ನಕ್ಷೆ, ಇತ್ತೀಚಿನ ಪಹಣಿ ಪತ್ರ ದಾಖಲೆಗಳು ಹಾಗೂ ತಾಲೂಕು ಮಟ್ಟದ ಸಮಿತಿಯಿಂದ ಪಡೆದಿರುವ ನಿರಾಕ್ಷೇಪಣಾ ಪತ್ರದೊಂದಿಗೆ ಸಲ್ಲಿಸಬೇಕು. ಐSಆಂ Poಡಿಣಚಿಟ ನ ನಮೂನೆಯಲ್ಲಿರುವ ಎಲ್ಲಾ ಕಲಂಗಳನ್ನು ವಿವರದೊಂದಿಗೆ ಭರ್ತಿ ಮಾಡಬೇಕು. 

ತಾಲೂಕು ಮಟ್ಟದ ಸಮಿತಿಯು ನಿಗದಿಪಡಿಸುವ ಸಾರ್ವಜನಿಕ ವಸತಿ ಹಾಗೂ ಅಂಗಡಿ ಇರುವ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಬಹುದಾಗಿದ್ದು, ಸಂಬAಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರ ಬಂದಲ್ಲಿ ದಿ ಎಕ್ಸ್ಪ್ಲೋಸಿವ್ ಆಕ್ಟ್ ೧೮೮೪ ಸೆಕ್ಷನ್ ೮೪ ಹಾಗೂ ಎಕ್ಸ್ಪ್ಲೋಸಿವ್ ರೂಲ್ಸ್ ೨೦೦೮ ಕಾಯಿದೆ/ ನಿಯಮಾವಳಿಗಳಿಗೆ ಒಳಪಟ್ಟು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪರವಾನಿಗೆ ಮಂಜೂರು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ : ವಿಶ್ವ ನ್ಯೂಸ್24

**ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ** ಕಾಪು: ಕೇಂದ್ರ ಉಕ್ಕು ಮತ್ತು ಬೃಹತ್…

10 hours ago

ಮತಾಂತರ ನಿಷೇಧ, ಗೋಹತ್ಯೆ ಪ್ರತಿಬಂಧಕ ಕಾಯ್ದೆ ವಾಪಸು ಪಡೆದರೆ ರಾಜ್ಯಾದ್ಯಂತ ಬೃಹತ್ ಜನಾಂದೋಲನ: ವಿಹಿಂಪ ಎಚ್ಚರಿಕೆ – vishwanews24

ಮತಾಂತರ ನಿಷೇಧ, ಗೋಹತ್ಯೆ ಪ್ರತಿಬಂಧಕ ಕಾಯ್ದೆ ವಾಪಸು ಪಡೆದರೆ ರಾಜ್ಯಾದ್ಯಂತ ಬೃಹತ್ ಜನಾಂದೋಲನ: ವಿಹಿಂಪ ಎಚ್ಚರಿಕೆ ಉಡುಪಿ: ರಾಜ್ಯ ಸರ್ಕಾರವು…

10 hours ago

ನೆಹರು ದೇಶದ ಅಭಿವೃದ್ಧಿಗೆ ಭದ್ರವಾದ ಅಡಿಪಾಯ ಹಾಕಿದ ಮಹಾನ್ ನಾಯಕ : ಸಿದ್ದರಾಮಯ್ಯ – vishwanews24

ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…

2 days ago

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  – vishwanews24

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…

2 days ago

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ – vishwanews24

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…

2 days ago

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

2 days ago