ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಲ್ಪೆಗೆ ಆಗಮಿಸಿದ ಭೂಗತ ಪಾತಕಿ ರವಿ ಪೂಜಾರಿ – vishwanews24
ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮಲ್ಪೆಗೆ ಆಗಮಿಸಿದ ಭೂಗತ ಪಾತಕಿ ರವಿ ಪೂಜಾರಿ
ಉಡುಪಿ: ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭೂಗತ ಪಾತಕಿ ರವಿ ಪೂಜಾರಿಯನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಶನಿವಾರ ಮಲ್ಪೆಗೆ ಕರೆತಂದಿದ್ದಾರೆ.
ರವಿ ಪೂಜಾರಿಯವರ ತಾಯಿ ಸುಶೀಲಾ ಪೂಜಾರ್ತಿ (86) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದರು. ಅವರಿಗೆ ಐವರು ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳು ಹಾಗೂ ರವಿ ಪೂಜಾರಿ ಸೇರಿದಂತೆ ಮೂವರು ಗಂಡು ಮಕ್ಕಳಿದ್ದಾರೆ.
ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ : ನೋಂದಣಿಗೆ ಸೂಚನೆ – vishwanews24
ಶನಿವಾರ ಮಲ್ಪೆಯ ನೆರ್ಗಿಯಲ್ಲಿರುವ ಹಿರಿಯ ಮನೆಯಲ್ಲಿ ಸುಶೀಲಾ ಪೂಜಾರ್ತಿಯವರ ಅಂತ್ಯ ಸಂಸ್ಕಾರ ನಡೆಯಲಿದೆ. ನ್ಯಾಯಾಲಯದ ಅನುಮತಿ ಮೇರೆಗೆ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ರವಿ ಪೂಜಾರಿಯನ್ನು ಬೆಂಗಳೂರಿನ ಪೊಲೀಸರ ಭದ್ರತೆಯಲ್ಲಿ ಮಲ್ಪೆಗೆ ಕರೆತರಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಪೊಲೀಸರಿಂದಲೂ ಹೆಚ್ಚುವರಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
![]()
