ಉಡುಪಿ: ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ಬಾಕಿ ಇರುವ ವೇತನವನ್ನು ಪಾವತಿಸಲು ರಾಜ್ಯ ಸರಕಾರ 228.33 ಲಕ್ಷ ರೂ. ಹಾಗೂ ಇತರ ಬಾಕಿ ಇರುವ ಸಾದಿಲ್ವಾರು ವೆಚ್ಚ 140.37 ಲಕ್ಷ ರೂ.ಸೇರಿದಂತೆ ಒಟ್ಟು 368.70 ಲಕ್ಷ ರೂ. ಭರಿಸಲು ಅನುಮತಿ ನೀಡಿ ಆದೇಶಿಸಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಖಾಸಗಿಯವರು ನಿರ್ವಹಿಸುತ್ತಿದ್ದ 200 ಹಾಸಿಗೆಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸರಕಾರದ ಸುಪರ್ದಿಗೆ ಪಡೆಯಲಾಗಿತ್ತು. ಸರಕಾರದ ಸುಪರ್ದಿಗೆ ಪಡೆಯುವ ಮೊದಲು ಕಾರ್ಯನಿರ್ವಹಿಸಲಾಗಿದ್ದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಬಾಕಿ ವೇತನ ಭತ್ಯೆ ಹಾಗೂ ಇತರ ಬಾಕಿ ಮೊತ್ತ ಭರಿಸಲು ಒಟ್ಟು 3,68,71,724ರೂ. ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿತ್ತು.
ಕುಂದಾಪುರ : ಕಾಲುವೆಯ ಹೂಳಿನಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ದನದ ರಕ್ಷಣೆ – Vishwanews24
ಈ ಮೊತ್ತವನ್ನು ತಕ್ಷಣದಲ್ಲಿ ಪಾವತಿಸಲು ಕಳೆದ ಜೂನ್ ತಿಂಗಳಲ್ಲಿ ಶಾಸಕ ಕೆ ರಘುಪತಿ ಭಟ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಲ್ಲಿ ಚರ್ಚಿಸಿ ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿ ವೇತನ ಬಾಕಿ ಪಾವತಿ ಮಾಡುವುದು ಎಂದು ಷರಾ ಬರೆದು ಆರ್ಥಿಕ ಇಲಾಖೆಗೆ ಸೂಚಿಸಿದ್ದರು. ಇದೀಗ ಆರ್ಥಿಕ ಇಲಾಖೆಯ ಒಪ್ಪಿಗೆಯಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 368.70 ಲಕ್ಷ ರೂ. ಭರಿಸಲು ಅನುಮತಿ ನೀಡಿ ಈ ಆದೇಶ ಹೊರಡಿಸಿದೆ.
ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ್ ಅವರಿಗೆ ಶಾಸಕ ರಘುಪತಿ ಭಟ್ ಕೃತಜ್ಞತೆ ಸಲ್ಲಿಸಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…