Featured

ಉಡುಪಿ : ತಾರಾನಾಥ ವರ್ಕಾಡಿಯವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ – Vishwanews24

ಉಡುಪಿ : ತಾರಾನಾಥ ವರ್ಕಾಡಿಯವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ

ಉಡುಪಿಯ ಯಕ್ಷಗಾನ ಕಲಾರಂಗವು ಯಕ್ಷಗಾನ ಸಂಘಟನೆ-ಕಲಾವಿದರು ಮತ್ತು ಯಕ್ಷಗಾನ ವಿದ್ವಾಂಸರನ್ನು ಗೌರವಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಇಪ್ಪತ್ತು ಪ್ರಶಸ್ತಿಗಳನ್ನು ಪ್ರದಾನ ಮಾಡುತ್ತಾ ಬಂದಿದೆ. ಈ ವರ್ಷದ ಯಕ್ಷಗಾನ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಯಕ್ಷಗಾನ ಕಲಾವಿದ, ಅರ್ಥಧಾರಿ, ಪ್ರಸಂಗಕರ್ತ, ಪತ್ರಿಕಾ ಸಂಪಾದಕ, ಲೇಖಕ, ಯಕ್ಷಗುರು ಹೀಗೆ ಕಲೆ-ಸಾಹಿತ್ಯ ಸಂಬ0ಧಿ ಬಹು ಆಯಾಮಗಳಲ್ಲಿ ಸಾಧನೆ ಮಾಡಿದ ತಾರಾನಾಥ ವರ್ಕಾಡಿಯವರನ್ನು ಸಂಸ್ಥೆ ಆಯ್ಕೆ ಮಾಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ ೨೨, ೨೦೨೨ ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಲಾಕಾರ್ಯಕ್ರಮದೊಂದಿಗೆ ಸಂಪನ್ನಗೊಳ್ಳಲಿದೆ. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಅತಿಥಿಗಣ್ಯರ ಸಮಕ್ಷ ಜರಗಲಿದೆ. ಡಾ. ತಲ್ಲೂರು ಶಿವರಾಮ ಶೆಟ್ಟರ ನೇತೃತ್ವದ ತಲ್ಲೂರು ಫ್ಯಾಮಿಲಿ ಟ್ರಸ್ಟ್ (ರಿ.) ಉಡುಪಿ ಪ್ರಾಯೋಜಕತ್ವದ ಈ ಪ್ರಶಸ್ತಿಯು ರೂ. ೪೦,೦೦೦/- ನಗದು ಪುರಸ್ಕಾರ ಒಳಗೊಂಡಿರುತ್ತದೆ ಎಂಬುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago