Featured

ಉಡುಪಿ : ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ – Vishwanews24

ಉಡುಪಿ : ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆ – Vishwanews24

ಉಡುಪಿ : ಜಿಲ್ಲೆಯ ಯುವಕರ ಪ್ರತಿಭೆಯನ್ನು ತೊರ್ಪಡಿಸಲು, ದೇಶಭಕ್ತಿ ಮತ್ತು ರಾಷ್ಟç ನಿರ್ಮಾಣದಲ್ಲಿ ಯುವಜನರು ಕುರಿತ ಭಾಷಣಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ನೆಹರು ಯುವ ಕೇಂದ್ರಗಳಿಗೆ ವಹಿಸಲಾಗಿರುತ್ತದೆ.

ಬಹುಮಾನಗಳ ವಿವರ : ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಪ್ರಶಸ್ತಿ
ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ ಬಹುಮಾನವಾಗಿ
2,000 ರೂ., ಹಾಗೂ ತೃತೀಯ ಬಹುಮಾನವಾಗಿ 1,000 ರೂ. ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ
ಬಹುಮಾನವಾಗಿ 25,000 ರೂ., ದ್ವಿತೀಯ ಬಹುಮಾನವಾಗಿ 10,000 ರೂ. ಹಾಗೂ ತೃತೀಯ ಬಹುಮಾನವಾಗಿ 5,000 ರೂ. ಮತ್ತು ರಾಷ್ಟç
ಮಟ್ಟದ ವಿಜೇತರುಗಳಿಗೆ ಪ್ರಥಮ ಬಹುಮಾನವಾಗಿ 2 ಲಕ್ಷ ರೂ., ದ್ವಿತೀಯ ಬಹುಮಾನವಾಗಿ 1 ಲಕ್ಷ ರೂ. ಹಾಗೂ ತೃತೀಯ ಬಹುಮಾನವಾಗಿ
50,000 ರೂ. ನೀಡಲಾಗುವುದು.

ಭಾಷಣದ ವಿಷಯ: “Patriotism & Nation Building” with the Theme Sabka Saath, Sabka Vikas, Sabka Vishwas (Together we Grow, We Prosper, Together we Build a Strong and Inclusive India).). ಭಾಷಣ ಸ್ಪರ್ಧೆಗೆ 9-10 ನಿಮಿಷಗಳ ಕಾಲಾವಕಾಶ ನಿಗದಿಪಡಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ಭಾಷಣ ಮಾಡಲು ಅವಕಾಶ ಇರುತ್ತದೆ.

ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆಯು ನಡೆಯುವ ಸ್ಥಳ ಹಾಗೂ ಸಂಪರ್ಕಿಸ ಬೇಕಾದ ವ್ಯಕ್ತಿಗಳ ವಿವರ :– ಕುಂದಾಪುರ, ಬೈಂದೂರು
ತಾಲೂಕುಗಳಿಗೆ ಸಂಬ0ಧಿಸಿದ0ತೆ ನವೆಂಬರ್ 25 ರಂದು ಬೆಳಗ್ಗೆ 10.30 ಕ್ಕೆ ಕುಂದಾಪುರ ಭಂಡಾರ್‌ರ‍್ಸ್ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು,
ಎನ್.ಎಸ್.ಎಸ್ ಅಧಿಕಾರಿ ಅರುಣ್ ಕುಮಾರ್ ಮೊ.ನಂ. 9480396456 / 9972404202, ಉಡುಪಿ, ಕಾಪು ಮತ್ತು ಬ್ರಹ್ಮಾವರ
ತಾಲೂಕುಗಳಿಗೆ ಸಂಬ0ಧಿಸಿದ0ತೆ ನವೆಂಬರ್ 26 ರಂದು ಬೆಳಗ್ಗೆ 11 ಗಂಟೆಗೆ ನಗರದ ಎಂ.ಜಿ.ಎA ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು,
ಎನ್.ಎಸ್.ಎಸ್ ಅಧಿಕಾರಿ ಸುಚಿತ್ ಕೋಟ್ಯಾನ್ ಮೊ.ನಂ: 8884323443 / 9739430331 ಹಾಗೂ ಕಾರ್ಕಳ, ಹೆಬ್ರಿ ತಾಲೂಕುಗಳಿಗೆ
ಸಂಬ0ಧಿಸಿದ0ತೆ ನವೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ ಸ್ಪರ್ಧೆ ನಡೆಯಲಿದ್ದು, ಎನ್.ಎಸ್.ಎಸ್
ಅಧಿಕಾರಿ ಸುಚಿತ್ರಾ ಮೊ.ನಂ: 8197488357 ಅನ್ನು ಸಂಪರ್ಕಿಸಬಹುದಾಗಿದೆ.

ಭಾಷಣ ಸ್ಪರ್ಧೆಯಲ್ಲಿ 18 ರಿಂದ 29 ವರ್ಷದೊಳಗಿನ ಯುವಜನರು ಭಾಗವಹಿಸಬಹುದಾಗಿದ್ದು, ಕಡ್ಡಾಯವಾಗಿ ಉಡುಪಿ ಜಿಲ್ಲೆಯ
ನಿವಾಸಿಗಳಾಗಿರಬೇಕು. ಸ್ಪರ್ಧಾಳುಗಳು ತಮ್ಮ 01 ಪಾಸ್ ಪೋರ್ಟ ಸೈಜ್ ಪೋಟೊ, ಆಧಾರ್ ಕಾರ್ಡ್ (ಕಡ್ಡಾಯವಾಗಿ) ಪ್ರತಿ, ಪ್ಯಾನ್ ಕಾರ್ಡ್/
ಶಾಲಾ ಕಾಲೇಜಿನಿಂದ ಅಥವಾ ಆಫೀಸ್/ಸಂಸ್ಥೆಗಳಿ0ದ ಜಾರಿಯಾದ ಅಧಿಕೃತ ಫೋಟೊ ಇರುವ ಗುರುತಿನ ಚೀಟಿಯನ್ನು, ವಯೋಮಿತಿಯ
ತಪಾಸಣೆಗಾಗಿ ಅಗತ್ಯವಾಗಿ ತರಬೇಕು

ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರದ ದೂರವಾಣಿ ಸಂಖ್ಯೆ: 0820-2574992 ಅಥವಾ ಇ-ಮೇಲ್
dyc.udupi@gmail.com ಅನ್ನು ಸಂಪರ್ಕಿಸುವ0ತೆ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ವಿಲ್ಲ್ಫ್ರೆಡ್ ಡಿ
ಸೋಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

3 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

4 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

4 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

4 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

5 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

5 hours ago