ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಉಡುಪಿ ತಾಲೂಕು ವ್ಯಾಪ್ತಿಗೆ ಬರುವ 10 ಗ್ರಾಪಂಗಳಿಗೆ ಸಂಬಂಧಿಸಿದ ಜನ ಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಜನರ ಮನೆಬಾಗಿಲಿಗೆ ಸರಕಾರಿ ಸೇವೆಗಳನ್ನು ಕೊಂಡೊಯ್ದು, ಅವರ ಸಮಸ್ಯೆಗಳನ್ನು ಪರಿಹರಿಸುವುದೇ ನಮ್ಮ ಧ್ಯೇಯವಾಗಿದೆ. ಅಧಿಕಾರದಲ್ಲಿದ್ದಾಗ ಜನರ ಋಣ ತೀರಿಸುವ ಕೆಲಸವಾಗಬೇಕು. ನಮ್ಮ ಆತ್ಮ ಒಪ್ಪುವ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಸಭೆಯಲ್ಲಿ 80 ಬಡಗುಬೆಟ್ಟು ಗ್ರಾಪಂ ಅಧ್ಯಕ್ಷ ಕೇಶವ ಕೋಟ್ಯಾನ್, ಕೊಡಿಬೆಟ್ಟು ಗ್ರಾಪಂ ಅಧ್ಯಕ್ಷ ಸಂದೀಪ್ ಮಡಿವಾಳ, ಬೈರಂಪಳ್ಳಿ ಗ್ರಾಪಂ ಅಧ್ಯಕ್ಷ ಪ್ರಸಾದ್ ಮಲ್ಯ, ಪೆರ್ಡೂರು ಗ್ರಾಪಂ ಅಧ್ಯಕ್ಷೆ ಚೇತನಾ ಶೆಟ್ಟಿ, ಉಡುಪಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ವಿಜಯಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು. ಉಡುಪಿ ತಹಶೀಲ್ದಾರ್ ಗುರುರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…