Featured

ಉಡುಪಿ : ತಾ. ಪಂ ಮತ್ತು ಜಿ. ಪಂ. ವ್ಯಾಪ್ತಿಯಲ್ಲಿ ಸಭೆಯನ್ನು ನಡೆಸಿ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಶ್ರಮವಹಿಸಿ : ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ : ತಾ. ಪಂ ಮತ್ತು ಜಿ. ಪಂ. ವ್ಯಾಪ್ತಿಯಲ್ಲಿ ಸಭೆಯನ್ನು ನಡೆಸಿ, ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಶ್ರಮವಹಿಸಿ : ಅಶೋಕ್ ಕುಮಾರ್ ಕೊಡವೂರು -Vishwanews24

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹತ್ತು ಬ್ಲಾಕ್ ಅಧ್ಯಕ್ಷರುಗಳು ಹಾಗೂ ನಾಯಕರ ಸಭೆಯು ಏ10 ರಂದು ಕಾರ್ತಿಕ್‌ ಹೋಟೆಲ್‌ನಲ್ಲಿ ಜರಗಿತು. ಈ ವೇಳೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಮಾತನಾಡಿ, ಕಳೆದ ಗ್ರಾಮ ಪಂಚಾಯತ್ ಚುನಾವಣೆಯನ್ನು ಬ್ಲಾಕ್ ಅಧ್ಯಕ್ಷರು ಹಾಗೂ ನಾಯಕರು ಸಮರ್ಥವಾಗಿ ನಿಭಾಯಿಸಿದ್ದಾರೆ.

ಅದರಂತೆ ಮುಂಬರುವ ಜಿಲ್ಲಾ ಪಂಚಾಯತ್ | ತಾಲೂಕು ಪಂಚಾಯತ್ ಚುನಾವಣೆಗೆ ಮೂವತ್ತು ವೀಕ್ಷಕರನ್ನು ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ
ನೇಮಿಸಲಾಗುವುದು. ಇವರು ಬ್ಲಾಕ್ ಅಧ್ಯಕ್ಷರನ್ನು ಭೇಟಿ ಮಾಡಿ ಗ್ರಾಮೀಣ ಕಾಂಗ್ರೆಸ್, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ
ಸಭೆಯನ್ನು ನಡೆಸಿ, ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಶ್ರಮವಹಿಸಬೇಕು ಎಂದರು.

ಉಡುಪಿ :ಧಾರಾಕಾರ ಸುರಿದ ಮಳೆ ; ಮನೆಗೆ ಸಿಡಿಲು ಬಡಿದು ಲಕ್ಷಾಂತರ ರೂ.ನಷ್ಟ -Vishwanews24

ಸಭೆಯಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರು ಮಾತನಾಡಿ, ಕಳೆದ ಜನಧ್ವನಿ ಪಾದಯಾತ್ರೆಯು ಬಹಳ ಯಶಸ್ವಿಯಾಗಿ ನಡೆಯಿತು.
ತದನಂತರ ಹಿರಿಯಡ್ಕದಿಂದ 80 ಬಡಗುಬೆಟ್ಟುವರೆಗೆ ಅಭೂತಪೂರ್ವ ಜನಧ್ವನಿ ಪಾದಯಾತ್ರೆಯು ತಮ್ಮೆಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಯಿತು.
ಮುಂಬರುವ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗೆ ಜಿಲ್ಲಾ ಕಾಂಗ್ರೆಸ್ ಅನ್ನು ಕೇಂದ್ರೀಕರಿಸಿ ಅದರ ನಿರ್ದೇಶನದಂತೆ ಚುನಾವಣೆ
ನಡೆಸಲಾಗುವುದು ಎಂದರು. ಮಾಜಿ ಶಾಸಕ ಗೋಪಾಲ ಪೂಜಾರಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಬ್ಲಾಕ್ ಅಧ್ಯಕ್ಷರುಗಳಿಗೆ ಸಲಹೆ ಸೂಚನೆ
ನೀಡಿದರು.

ಸಭೆಯಲ್ಲಿ ಕೆ.ಪಿ.ಸಿ.ಸಿ. ಸ್ಥಿರಾಸ್ಥಿ ಮತ್ತು ಕಟ್ಟಡ ಸಮಿತಿ ಸದಸ್ಯರಾದ ಪ್ರಸಾದ್‌ರಾಜ್ ಕಾಂಚನ್, ಕಾಂಗ್ರೆಸ್ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ಲಾಕ್ ಅಧ್ಯಕ್ಷರುಗಳಾದ ಹರಿಪ್ರಸಾದ್ ಶೆಟ್ಟಿ, ದಿನಕರ್ ಹೇರೂರು, ಶಂಕರ್ ಕುಂದರ್, ನವೀನ್‌ಚಂದ್ರ ಸುವರ್ಣ, ಮಂಜುನಾಥ ಪೂಜಾರಿ, ಸದಾಶಿವ ದೇವಾಡಿಗ, ಸತೀಶ್ ಅಮೀನ್ ಪಡುಕೆರೆ, ಪ್ರದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪ್ರಶಾಂತ್ ಜತ್ತನ್ನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ಕುಶಲ್ ಶೆಟ್ಟಿ, ಕಾರ್ಯದರ್ಶಿ ಹಬೀಬ್ ಆಲಿ ಖಾದರ್ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು: ಯುವತಿಗೆ ಗುಪ್ತಾಂಗ ತೋರಿಸಿದ್ದ ಆರೋಪಿ ಪೊಲೀಸ್ ವಶಕ್ಕೆ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

17 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago