Featured

ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾ.ಹೆ ಅಭಿವೃದ್ದಿಗೆ ನಿತಿನ್ ಗಡ್ಕರಿ ಸೂಚನೆ : ಸಂಸದೆ ಶೋಭಾ ಕರಂದ್ಲಾಜೆ-Vishwanews24

ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾ.ಹೆ ಅಭಿವೃದ್ದಿಗೆ ನಿತಿನ್ ಗಡ್ಕರಿ ಸೂಚನೆ : ಸಂಸದೆ ಶೋಭಾ ಕರಂದ್ಲಾಜೆ-Vishwanews24

ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಹೆಬ್ರಿ- ಹಿರಿಯಡ್ಕ ವರೆಗೆ ದ್ವಿಪಥ ರಸ್ತೆ, ಹಿರಿಯಡ್ಕ ದಿಂದ ಪರ್ಕಳ ವರೆಗೆ ಹಾಗೂ ಆದಿ ಉಡುಪಿಯಿಂದ ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಸಂಬಂಧ ಮಾ.೨೩ ರಂದು ಸಂಸದೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ಧಾರಿ ಸಚಿವ ನಿತಿನ್ ಗಡ್ಕರಿ ಯವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಪ್ರಸ್ತಾವನೆಯಲ್ಲಿ ಆದಿ ಉಡುಪಿಯಿಂದ ಮಲ್ಪೆವರೆಗೆ ರಸ್ತೆ ಅಭಿವೃದ್ಧಿಗೆ ಭೂಸ್ವಾಧೀನ ಪಡಿಸಿಕೊಳ್ಳಲು ತಕ್ಷಣದಲ್ಲಿ ರೂ. 24.08 ಕೋಟಿ ಬಿಡುಗಡೆ ಮಾಡುವುದು ಹಾಗೂ ಹೆಬ್ರಿ – ಹಿರಿಯಡ್ಕ ದ್ವಿಪಥ ರಸ್ತೆ, ಹಿರಿಯಡ್ಕ – ಪರ್ಕಳ ಮತ್ತು ಆದಿಉಡುಪಿ – ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲು ರೂ. 288.00 ಕೋಟಿ ಅನುದಾನ ಬಿಡುಗಡೆಗೊಳಿಸಲು ಮನವಿ ಸಲ್ಲಿಸಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಭೂ ಸಾರಿಗೆ ಮತ್ತು ಹೆದ್ಧಾರಿ ಸಚಿವ ನಿತಿನ್ ಗಡ್ಕರಿ ಯವರು ತಕ್ಷಣದಲ್ಲಿ ಯೋಜನೆ ಕಾರ್ಯಗತಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಉಡುಪಿ ಜಿಲ್ಲೆಯ ಬಹು ಬೇಡಿಕೆಯಾಗಿರುವ ಈ ಪ್ರಮುಖ ರಸ್ತೆಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಮುತುವರ್ಜಿವಹಿಸಿ ಕೇಂದ್ರ ಸಚಿವರನ್ನು ಭೇಟಿ ಮಾಡಿಸಿ ರಸ್ತೆಗಳ ಅಭಿವೃದ್ಧಿಯ ಪ್ರಾಮುಖ್ಯತೆಯ ವಸ್ತುಸ್ಥಿತಿಗಳನ್ನು ಮನವರಿಕೆ ಮಾಡಿದ ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸಿ ತಕ್ಷಣದಲ್ಲಿ ಸೂಕ್ತ ಕ್ರಮಕ್ಕೆ ಆದೇಶಿಸಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶಾಸಕ ರಘುಪತಿ ಭಟ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

2 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

3 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

3 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

3 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

3 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

4 hours ago