ಉಡುಪಿ

ಉಡುಪಿ :ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ  ಕೋರಿ ರಘುಪತಿ ಭಟ್‌ ಮನವಿಗೆ ಸಿಎಂ ಸ್ಪಂದನೆ -Vishwanews24

ಉಡುಪಿ :ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ  ಕೋರಿ ರಘುಪತಿ ಭಟ್‌ ಮನವಿಗೆ ಸಿಎಂ ಸ್ಪಂದನೆ -Vishwanews24

ಉಡುಪಿ : ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಕೋರಿ ಶಾಸಕ ರಘುಪತಿ ಭಟ್‌ ಅವರು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು ಸ್ಪಂಧನೆ ನೀಡಿದ್ದು ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಶಾಸಕ ರಘುಪತಿ ಭಟ್‌ ಅವರು, ”ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ, ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ನಾನು ಈ ಹಿಂದೆಯೇ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿರುವಂತೆ ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದು, ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ” ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಜನರು ತಮ್ಮದೇ ಆದ ಸಾಮಾಜಿಕ ಹಾಗೂ ಧಾರ್ಮಿಕ ಆಚರಣೆ ಮತ್ತು ಸಂಸ್ಕೃತಿಯನ್ನು ರೂಡಿಸಿಕೊಂಡು ಬಂದಿದ್ದು ಲಾಕ್‌ಡೌನ್‌ ಕಾರಣದಿಂದ ಈ ಆಚರಣೆಗೆ ಧಕ್ಕೆ ಉಂಟಾಗಿದೆ. ಧಾರ್ಮಿಕ ಸೇವೆಗಳಿಗೆ ನಿಷೇಧ ಹೇರಿದ್ದರಿಂದ ತುಳು ನಾಡ ದೈವರಾಧಕರ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟಾಗಿದ್ದಲ್ಲದೇ ದೈವ ಪರಿಚಾರಕರ ಅಂದರೆ ನಾಗಸ್ವರ ವಾದಕರು, ಮಡಿವಾಳ, ದರ್ಶನ ಪಾತ್ರಿ, ಮಧ್ಯಸ್ಥರು, ಗರೋಡಿ ವರ್ಗದವವರು, ನಲಿಕೆ ವರ್ಗ, ಪಂಬದ ವರ್ಗದವರು ಸೇರಿ ಸುಮಾರು 600 ಜನರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ> ಈ ಹಿನ್ನೆಲೆ ಈ ಆಚರಣೆಗಳಿಗೆ ಅವಕಾಶ ನೀಡಬೇಕು ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಿಸಲು 10 ಸಾವಿರ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ರಘುಪತಿ ಭಟ್‌ ಮನವಿ ಸಲ್ಲಿಸಿದ್ದರು.

 

 

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

8 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

8 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

8 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

8 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

8 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

8 hours ago