Featured

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ

ಉಡುಪಿ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಉದಯ್ ಶೆಟ್ಟಿ ಅವರು, ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ವತಿಯಿಂದ “ತುಳು ಅಭಿವೃದ್ಧಿ ಪ್ರಾಧಿಕಾರ” ವನ್ನು ಶೀಘ್ರವಾಗಿ ಸ್ಥಾಪಿಸಬೇಕೆಂದು ಮುಖ್ಯಮಂತ್ರಿಗಳಿಗೆಮನವಿ ಸಲ್ಲಿಸಿದ್ದೇನೆ. ತುಳು ಭಾಷೆಯು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃಭಾಷೆಯಾಗಿದೆ. ತುಳು ಭಾಷೆಯು ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಅವಿಭಾಜ್ಯ ಅಂಗವಾಗಿದೆ. ಜಾಗತೀಕರಣದ ಪರಿಣಾಮವಾಗಿ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ತುಳು ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯತೆ ಹೆಚ್ಚಾಗಿದೆ ಎಂದರು.

ಈಗಾಗಲೇ ಯುನೆಸ್ಕೋ (UNESCO) ಸಹ ತುಳು ಭಾಷೆಯನ್ನು ಸಂರಕ್ಷಿಸಬೇಕಾದ ಭಾಷೆಗಳ ಪೈಕಿ ಪರಿಗಣಿಸಿರುವ ಹಿನ್ನೆಲೆಯಲ್ಲಿ, ತುಳು ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ವಿಶೇಷ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಆದ್ದರಿಂದ ತುಳು ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ತುಳು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ, ತುಳು ಸಾಹಿತ್ಯ, ಸಂಶೋಧನೆ ಹಾಗೂ ಪ್ರಕಟಣೆಗಳಿಗೆ ಉತ್ತೇಜನ, ಶಾಲೆ ಮತ್ತು ಕಾಲೇಜುಗಳಲ್ಲಿ ತುಳು ಅಧ್ಯಯನಕ್ಕೆ ಹೆಚ್ಚಿನ ಪ್ರೋತ್ಸಾಹ, ತುಳು ಜಾನಪದ ಕಲೆ, ಯಕ್ಷಗಾನ, ಭೂತಾರಾಧನೆ ಹಾಗೂ ಇತರ ಸಾಂಸ್ಕೃತಿಕ ಪರಂಪರೆಗಳ ಸಂರಕ್ಷಣೆ, ತುಳು ಭಾಷೆಗೆ ಸಂವಿಧಾನಿಕ ಹಾಗೂ ಶೈಕ್ಷಣಿಕ ಮಾನ್ಯತೆ ದೊರಕುವಂತೆ ಕ್ರಮ ಕೈಗೊಳ್ಳುವುದು, ತುಳುನಾಡಿನ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನಕ್ಕೆ ಬೇಡಿಕೆ
ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನಲ್ಲಿ ತುಳು ಭವನ ನಿರ್ಮಾಣ ಮಾಡುವ ಕುರಿತು ಮನವಿ ಮಾಡಿಕೊಂಡಿದ್ದು, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸುಸಜ್ಜಿತ ತುಳು ಭವನ ನಿರ್ಮಾಣ ಅಗತ್ಯವಾಗಿದೆ. ಕಾರ್ಕಳವು ತುಳುನಾಡಿನ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಇಲ್ಲಿ ತುಳು ಭಾಷೆ, ಯಕ್ಷಗಾನ, ಭೂತಾರಾಧನೆ, ನಾಗಾರಾಧನೆ ಹಾಗೂ ಇತರ ಜನಪದ ಕಲೆಗಳು ಇಂದಿಗೂ ಜೀವಂತವಾಗಿವೆ. ತುಳು ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ, ಅಧ್ಯಯನ ಮತ್ತು ಪ್ರಚಾರಕ್ಕಾಗಿ ಕಾರ್ಕಳದಲ್ಲಿ ತುಳು ಭವನದ ಅಗತ್ಯವಿದೆ.ಪ್ರಸ್ತಾವಿತ ತುಳು ಭವನದಲ್ಲಿ ಗ್ರಂಥಾಲಯ, ಸಂಶೋಧನಾ ಕೇಂದ್ರ, ಸಭಾಂಗಣ, ವಸ್ತುಸಂಗ್ರಹಾಲಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬಹುದಾಗಿದೆ. ಇದರಿಂದ ತುಳು ಭಾಷೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ಆದ್ದರಿಂದ, ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನಲ್ಲಿ ಸರ್ಕಾರದ ವತಿಯಿಂದ ಸೂಕ್ತ ಜಾಗವನ್ನು ಗುರುತಿಸಿ, ಅಗತ್ಯ ಅನುದಾನವನ್ನು ಮಂಜೂರು ಮಾಡಿ ಶೀಘ್ರದಲ್ಲೇ ತುಳು ಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ಉದಯ್ ಶೆಟ್ಟಿ ಮುನಿಯಾಲ್ ಅವರು ನೂತನ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago