ಉಡುಪಿ

ಉಡುಪಿ : ತುಳು ಲಿಪಿ ಮಂದಾರ” ಬಿಡುಗಡೆ -Vishwanews24

ಉಡುಪಿ : ತುಳು ಲಿಪಿ ಮಂದಾರ” ಬಿಡುಗಡೆ -Vishwanews24

ತುಳು ಭಾಷೆ / ತುಳು ಲಿಪಿ ಪುರಾತನ ಕಾಲಘಟ್ಟದಲ್ಲಿ ಉಪಯೋಗ ಆಗುತ್ತಿದ್ದು ದಕ್ಕೆ ಪುರಾವೆ ಗಳಿವೆ – ತುಳು ಲಿಪಿ ಮಂದಾರ ಬಿಡುಗಡೆ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್.

ತಾಳೆಗರಿ ಉಪಯೋಗಿಸುತ್ತಿದ್ದ ಕಾಲಘಟ್ಟದಲ್ಲಿ ತುಳು ಲಿಪಿ ಬಳಕೆಯಾಗುತ್ತಿತ್ತು. ಪುರಾತನವಾದ ಐತಿಹಾಸಿಕ ಹಿನ್ನೆಲೆಯಿರುವ ತುಳು ಭಾಷೆ, ತುಳು ಲಿಪಿ ಮಧ್ವಾಚಾರ್ಯರ ಕಾಲಘಟ್ಟ ದಲ್ಲಿಯೂ ಬಳಕೆ ಮಾಡುತ್ತಿದ್ದರು ಎಂಬುದಕ್ಕೆ ಅಷ್ಠಮಠಗಳಲ್ಲಿ ಪುರಾವೆಗಳಿವೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಸೋಮವಾರದಂದು ಆಯೋಜಿಸಲಾದ “ತುಳು ಲಿಪಿ ಮಂದಾರ” ಬಿಡುಗಡೆ ಕಾರ್ಯಕ್ರಮದಲ್ಲಿ “ತುಳು ಲಿಪಿ ಮಂದಾರ”ವನ್ನು ಬಿಡುಗಡೆಗೊಳಿಸಿ ಮಾತನಾಡಿ ದರು. ಪ್ರಾಂತ್ಯಗಳು ಬದಲಾದಂತೆ ಆಡಳಿತ ವ್ಯವಸ್ಥೆಗಳಿಂದಾಗಿ ತುಳು ಲಿಪಿ ಜನಮಾನಸ ದಿಂದ ದೂರವಾಗಿದೆ. ಪ್ರಸಕ್ತ ದಿನಗಳಲ್ಲಿ ತುಳು ಭಾಷೆ ತುಳು ಲಿಪಿಯ ಬಗ್ಗೆ ಯುವ ಸಮು ದಾಯ ಮಾಡುತ್ತಿರುವ ಕೆಲಸ ಶ್ಲಾಘನೀಯ ವಾಗಿದೆ.

ವಿಧಾನ ಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳುವಿನಲ್ಲೇ ಮಾತ ನಾಡಲು ಅವಕಾಶ ಕಲ್ಪಿಸಲು ಮನವಿ ಮಾಡ ಲಾಗಿತ್ತು. ಆದರೆ ಸದನದಲ್ಲಿ ದಾಖಲಾಗುವ ಮಾಹಿತಿಗಳನ್ನು ದಾಖಲು ಮಾಡುವವರಿಗೆ ತುಳು ಭಾಷೆಯ ಅರಿವಿನ ಕೊರತೆಯಿರುವು ದರಿಂದ ಮುಂದಿನ ದಿನ ಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವ ಭರವಸೆಯನ್ನು ಸಭಾಧ್ಯಕ್ಷರು ನೀಡಿರುತ್ತಾರೆ ಎಂದು ಹೇಳಿದ ಅವರು ತುಳು ಲಿಪಿ, ಭಾಷೆ ಬಗ್ಗೆ ಜೈ ತುಳುನಾಡು ಸಂಘ ಟನೆಯ ಈ ಪ್ರಯತ್ನ ಉತ್ತಮ ಬೆಳವಣಿಗೆ. ಜನಮಾನಸದಲ್ಲಿ ತುಳು ಲಿಪಿ ಮೂಡಿ ಬಂದು ಎಲ್ಲರೂ ಬಳಸಿಕೊಳ್ಳುವಂತಾಗಬೇಕು ಎಂದರು.

ಈ ಸಂದರ್ಭದಲ್ಲಿ ತುಳು ಅಕಾಡೆಮಿಯ ಸದಸ್ಯ ರಾದ ಡಾll ಆಕಾಶ್ ರಾಜ್ ಜೈನ್, ತಾರಾ ಆಚಾರ್ಯ, ಜೈ ತುಳುನಾಡು ಸಂಘಟನೆಯ ಅಧ್ಯಕ್ಷರಾದ ಸುದರ್ಶನ್ ಸೂರತ್ಕಲ್, ಸದಸ್ಯ ರಾದ ಪ್ರಹ್ಲಾದ್ ಪಿ. ತಂತ್ರಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago