Featured

ಉಡುಪಿ : ತೆರೆದ ವಿಶಾಲ ಪ್ರದೇಶಗಳಲ್ಲಿ ಸಂತೆ ನಡೆಸಿ- ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ -Vishwanews24

ಉಡುಪಿ : ತೆರೆದ ವಿಶಾಲ ಪ್ರದೇಶಗಳಲ್ಲಿ ಸಂತೆ ನಡೆಸಿ- ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ -Vishwanews24

ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲೆಯ ಕೋವಿಡ್ -19 ಪಾಸಿಟಿವಿಟಿ ದರದ ಆಧಾರದ ಮೇಲೆ ಆರ್ಥಿಕ ಮತ್ತು ಇತರೆ ಚಟುವಟಿಕೆಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಂತೆಗಳನ್ನು ನಡೆಸಲು ಅನುಮತಿ ನೀಡಲಾಗಿರುತ್ತದೆ. ಅದರಂತೆ ವಾರದ ಸಂತೆಗಳನ್ನು ನಡೆಸುವಾಗ ಜನಜಂಗುಳಿ ಹೆಚ್ಚಾಗಿ ಉಂಟಾಗುವುದನ್ನು ನಿಯಂತ್ರಿಸುವ ಸಲುವಾಗಿ ವಿಶಾಲ ಪ್ರದೇಶಗಳಲ್ಲಿ ಸಂತೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಕಚೇರಿಯಿಂದ ನಿರ್ದೇಶನ ನೀಡಲಾಗಿರುತ್ತದೆ.

ಆದರೆ ಜಿಲ್ಲೆಯಲ್ಲಿ ವಾರದ ಸಂತೆಗಳನ್ನು ತೀರ ಇಕ್ಕಟ್ಟಿನ ಸ್ಥಳಗಳಲ್ಲಿ ನಡೆಸುತ್ತಿರುವುದು ಕಂಡುಬAದಿದ್ದು, ಇದರಿಂದಾಗಿ ಸಂತೆಗಳಲ್ಲಿ ಸಾಮಾನು ಖರೀದಿಸಲು ಬರುವ ಜನರು ಸೂಕ್ತ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಕೋವಿಡ್-19 ರ ನಿಯಮಗಳು ಉಲ್ಲಂಘನೆಯಾಗುತ್ತಿದ್ದು, ಕೊರೋನಾ ಸೋಂಕು ಹರಡುವಿಕೆಯ ಸಾಧ್ಯತೆಗಳು ಹೆಚ್ಚಾಗಿರುತ್ತದೆ.

ಆದುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಸಂತೆಗಳನ್ನು ನಡೆಸುವಾಗ ಸಾರ್ವಜನಿಕರ ನಡುವೆ ಸಾಮಾಜಿಕ ಅಂತರ ಹಾಗೂ ಇತರೆ ಕೋವಿಡ್-19 ಸಂಬoಧಿತ ನಿಯಮಗಳು ಪಾಲನೆಯಾಗುವ ಬಗ್ಗೆ ನೋಡಿಕೊಳ್ಳಲು ನಗರಸಭೆಯ ಆಯುಕ್ತರು, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ಗಳ ಮುಖ್ಯಾಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆಗಳ ಕಾರ್ಯದರ್ಶಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಇವರುಗಳು ವಾರದ ಸಂತೆಗಳನ್ನು ಸಾಕಷ್ಟು ಸ್ಥಳಾವಕಾಶವಿರುವ ವಿಶಾಲ ಪ್ರದೇಶಗಳಲ್ಲಿ ನಡೆಸಲು ಕಡ್ಡಾಯವಾಗಿ ಕ್ರಮವಹಿಸಿ, ಸಂತೆಗಳಲ್ಲಿ ಕೋವಿಡ್-19 ಸಂಬoಧಿತ ನಿಯಮಗಳಾದ ಮುಖಗವಸು ಧರಿಸುವುದು, ಕೈಗಳ ನೈರ್ಮಲ್ಯ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡಿರುವುದರ ಕುರಿತು ಹಾಗೂ ಸಾರ್ವಜನಿಕರು ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು.

ತಪ್ಪಿದಲ್ಲಿ ಅಥವಾ ಈ ನಿಯಮಗಳು ಉಲ್ಲಂಘನೆಯಾದಲ್ಲಿ ಸಂಬoಧಪಟ್ಟ ಆಯುಕ್ತರು, ಮುಖ್ಯಾಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆಗಳ ಕಾರ್ಯದರ್ಶಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹೊಣೆಗಾರರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

18 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

18 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

19 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

19 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

19 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

19 hours ago