Featured

ಉಡುಪಿ : ದನಗಳ್ಳತನ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸರ ಕಾರ್ಯಾಚರಣೆಗೆ ಯಶ್ಪಾಲ್ ಸುವರ್ಣ ಶ್ಲಾಘನೆ – vishwanews24

ಉಡುಪಿ : ದನಗಳ್ಳತನ ಆರೋಪಿಗಳ ವಿರುದ್ಧ ಗಂಗೊಳ್ಳಿ ಪೊಲೀಸರ ಕಾರ್ಯಾಚರಣೆಗೆ ಯಶ್ಪಾಲ್ ಸುವರ್ಣ ಶ್ಲಾಘನೆ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದನಗಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೆಜಮಾಡಿ ಟೋಲ್ ಗೇಟ್ ಬಳಿ ಕಾರ್ಯಚರಣೆ ಮಾಡಿ ದಿಟ್ಟತನದಿಂದ ಓರ್ವ ಆರೋಪಿಯನ್ನು ಬಂಧಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಬಸವರಾಜ್ ಕನಹಟ್ಟಿ, ಪವನ್ ನಾಯಕ್ ಹಾಗೂ ಪೊಲೀಸ್ ಸಿಬ್ಬಂದಿ ಸಂದೀಪ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಶ್ಲಾಘಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಗೋ ಕಳ್ಳತನ ಆರೋಪಿಗಳು ಕರ್ತವ್ಯನಿರತ ಪೋಲಿಸರ ಮೇಲೆ ಕಾರನ್ನು ಹತ್ತಿಸಿ ಹತ್ಯೆಗೆ ಯತ್ನ ಮಾಡಿರುವುದು ಅತ್ಯಂತ ಖಂಡನೀಯ. ತಕ್ಷಣ ಪೊಲೀಸ್ ಇಲಾಖೆ ಪರಾರಿಯಾದ ಆರೋಪಿಗಳನ್ನು ತಕ್ಷಣ ಬಂಧಿಸಿ, ಈ ಆರೋಪಿಗಳ ಜಾಲವನ್ನು ಪತ್ತೆಹಚ್ಚಿ ಪರೋಕ್ಷ ಸಹಕಾರ ನೀಡುತ್ತಿರುವ ವ್ಯಕ್ತಿಗಳನ್ನು ಕೂಡ ಬಂಧಿಸಿ ಗೋಕಳ್ಳರ ಅಟ್ಟಹಾಸಕ್ಕೆ ಕಡಿವಾಣ ಹಾಕಬೇಕಿದೆ.

ಗೋಕಳ್ಳರ ಈ ಕೃತ್ಯದಿಂದ ಜನಸಾಮಾನ್ಯರು ಆತಂಕಗೊಂಡಿದ್ದು, ಕರ್ತವ್ಯ ನಿರತ ಪೋಲಿಸರ ಮೇಲೆಯೇ ಕಾರು ಚಲಾಯಿಸಿ ಹತ್ಯೆಗೆ ಯತ್ನಿಸುವ ಮೂಲಕ ಪೊಲೀಸ್ ಅಧಿಕಾರಿಗಳನ್ನು ಹೆದರಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಮ್ ಶಂಕರ್ ರವರು ಅಧಿಕಾರ ಸ್ವೀಕರಿಸಿದ ಬಳಿಕ ಗೋ ಕಳ್ಳತನ ಪ್ರಕರಣಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿರುವುದು ಶ್ಲಾಘನೀಯ. ಕರ್ತವ್ಯ ನಿರತ ಪೊಲೀಸರ ಹತ್ಯೆಗೆ ಯತ್ನಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳ ಹೆಡೆ ಮುರಿ ಕಟ್ಟುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಆಗ್ರಹಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago