ಉಡುಪಿ: ಕರ್ನಾಟಕದ ಕರಾವಳಿಗರನ್ನು ಮಹಾರಾಷ್ಟ್ರದ ಜತೆ ಭಾವನಾತ್ಮಕವಾಗಿ ಬೆಸೆದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲು (ಮಂಗಳೂರು ಸೆಂಟ್ರಲ್‌ನಿಂದ ಮಹಾರಾಷ್ಟ್ರದ ಲೋಕಮಾನ್ಯ ತಿಲಕ್ ಟರ್ಮಿನಲ್) 1990ರ ದಶಕದ ಬೋಗಿಗಳ ಬದಲು ನವ ತಂತ್ರಜ್ಞಾನದ ಆಧುನಿಕ ಸ್ಪರ್ಶ ಪಡೆದಿದೆ.
ಜರ್ಮನ್ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್‌ಗಳನ್ನು ಹೊಂದಿದ ಮತ್ಸ್ಯಗಂಧ ರೈಲು ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಬಂದಾಗ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹವಾನಿಯಂತ್ರಿತ ಬೋಗಿಯನ್ನೇರಿ ಕುಂದಾಪುರಕ್ಕೆ ಪ್ರಯಾಣ ಕೈಗೊಂಡರು. ಪ್ರಯಾಣದ ನಡುವೆ ರೈಲ್ವೆ ಪ್ರಯಾಣಿಕರ ಹೊಸ ಅನುಭವ, ಅನಿಸಿಕೆ ಆಲಿಸಿದರು.
ಉಡುಪಿ ಶಾಸಕ ಯಶಪಾಲ್ ಎ ಸುವರ್ಣ, ಕೊಂಕಣ ರೈಲ್ವೆಯ ಕಾರ್ಯತಂತ್ರ ಯೋಜನೆ ಮತ್ತು ವ್ಯವಹಾರ ಅಭಿವೃದ್ಧಿ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಜೋಸೆಫ್ ಇ ಜಾರ್ಜ್, ಮಂಗಳೂರಿನ ಹಿರಿಯ ತಾಂತ್ರಿಕ ವ್ಯವಸ್ಥಾಪಕ ದಿಲೀಪ್ ಡಿ. ಭರ್, ಕೊಂಕಣ ರೈಲ್ವೆ ಮಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಸುಧಾ ಕೃಷ್ಣಮೂರ್ತಿ, ಕೊಂಕಣ ರೈಲ್ವೆ ಕಾರವಾರ ವಿಭಾಗದ ಡೆಪ್ಯುಟಿ ಚೀಫ್ ಎಂಜಿನಿಯರ್ ವಿಜಯ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
1998ರ ಮೇ 1ರಂದು ಈ ರೈಲು ತನ್ನ ಸಂಚಾರವನ್ನು ಆರಂಭಿಸಿತ್ತು. ಅಂದಿನಿಂದ ಇಂದಿನವರೆಗೂ ಸುದೀರ್ಘ ಕಾಲ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿ ಜನರನ್ನು ಭಾವನಾತ್ಮಕವಾಗಿ ಬೆಸೆದಿತ್ತು. ಇದೀಗ ಈ ರೈಲು ಹೊಸ ತಂತ್ರಜ್ಞಾನದ ಮೂಲಕ ಆಧುನಿಕ ಸ್ಪರ್ಶ ಪಡೆದುಕೊಂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…