Featured

ಉಡುಪಿ : ದೀಪಾವಳಿ ಹಬ್ಬ ಆಚರಣೆ ಸಂದರ್ಭ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ – vishwanews24

ಉಡುಪಿ : ದೀಪಾವಳಿ ಹಬ್ಬ ಆಚರಣೆ ಸಂದರ್ಭ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ

ಉಡುಪಿ : ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ.

ಕಿರಿದಾದ ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳ ಸ್ಥಳಗಳಲ್ಲಿ ಯಾವುದೇ ಖಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ ಚಿಲ್ಲರೆ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು, ಪಟಾಕಿಗಳ ದಾಸ್ತಾನು ಹಾಗೂ ಮಾರಾಟಕ್ಕೆ ಅನುಮತಿ ಇರುವುದಿಲ್ಲ. 

ಸ್ಥಳೀಯ ಹಾಗೂ ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಣೆ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮೂಲಕ ನಿಷೇದಿತ ಪಟಾಕಿಗಳು ಹಾಗೂ ಸಂಬAಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಾಗಾಣೆ ಮಾಡುವ ವಾಹನಗಳನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

    ಪಟಾಕಿಗಳನ್ನು ಸರ್ಕಾರದ ಅಧಿಕಾರಿಗಳು ನಿಗಧಿಪಡಿಸಿದ ತೆರೆದ ಪ್ರದೇಶಗಳಲ್ಲಿ ಸ್ಥಳೀಯ ಆಡಳಿದ ವತಿಯಿಂದ ಅನುಮತಿ ನೀಡಲಾಗಿರುವ ತಾತ್ಕಾಲಿಕ ಮಳಿಗೆಗಳಲ್ಲಿ ಮಾತ್ರ ದಾಸ್ತಾನು ಮಾಡಲು ಹಾಗೂ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

    ಸವೋಚ್ಛ ನ್ಯಾಯಾಲಯವು ರಾತ್ರಿ 8 ಗಂಟೆಯಿAದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಮಕ್ಕಳು ಪಟಾಕಿಯನ್ನು ಸಿಡಿಸುವ ಸಂದರ್ಭದಲ್ಲಿ ಪೋಷಕರು ಜೊತೆಗಿದ್ದು, ಯಾವುದೇ ಅನಾಹುತ ಉಂಟಾಗದAತೆ ಕಾಳಜಿ ವಹಿಸಬೇಕು. ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿರುತ್ತದೆ.

    ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ತೆರೆಯುವವರು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಕ್ರಮಗಳು:

    ಮಳಿಗೆಗಳು ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಮಳಿಗೆಗಳನ್ನು ನಿರ್ಮಿಸಲು ಉಪಯೋಗಿಸುವ ಸಾಮಾಗ್ರಿಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದಷ್ಟೂ ಬೆಂಕಿಯನ್ನು ತಡೆಗಟ್ಟುವ (ಜಿiಡಿe ಡಿeಣಚಿಡಿಜಚಿಟಿಣ) ಸಾಮಾಗ್ರಿಗಳನ್ನು ನಿರ್ಮಾಣಕ್ಕೆ, ಉಪಯೋಗಿಸಬೇಕು. 

    ಪ್ರತಿಯೊಂದು ಮಳಿಗೆಯ ಮುಂಭಾಗದಿAದ ಹಾಗೂ ಹಿಂಭಾಗದಿAದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭದಲ್ಲಿ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು.

    ಪ್ರತಿಯೊಂದು ಮಳಿಗೆಗಳ ಗಾತ್ರ 10*10 ಚದರ ಅಡಿ ವಿಸ್ತೀರ್ಣಕ್ಕೆ ಸೀಮಿತಗೊಳಿಸಿರಬೇಕು ಮತ್ತು ಯಾವುದೇ ಹೆಚ್ಚಿನ ಮಿತಿಮೀರಿದ ದಾಸ್ತಾನಿನ ವ್ಯವಸ್ಥೆ ಇರಬಾರದು. ಮಳಿಗೆಯಲ್ಲಿ ಒಂದು 9 ಲೀಟರ್ ಸಾರ್ಮಥ್ಯದ ವಾಟರ್ ಫೈಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್ ನೀರನ್ನು ಇರಿಸಬೇಕು ಹಾಗೂ ಮಳಿಗೆಯ ಪಕ್ಕದಲ್ಲಿ ಎರಡು ಡ್ರಮ್ ನಲ್ಲಿ ಕನಿಷ್ಠ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು. 

    ಮಳಿಗೆಯಲ್ಲಿ ಅಡಿಗೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಬಾರದು ಎಂಬAತೆ ಸೂಚನಾ ಫಲಕವನ್ನು ಹಾಕಬೇಕು. ಪಟಾಕಿಯನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡಬೇಕು. ರಾತ್ರಿ ವೇಳೆ ಮಳಿಗೆಯಲ್ಲಿ ಯಾರು ಮಲಗಬಾರದು. ಪಟಾಕಿ ಮಳಿಗೆಗಳಲ್ಲಿ ಪಟಾಕಿಗಳನ್ನು ಪೂರ್ವಾಹ್ನ 6 ಗಂಟೆಯಿAದ ರಾತ್ರಿ 9 ಗಂಟೆಯ ವರೆಗೆ ಮಾರಾಟ ಮಾಡಬಹುದಾಗಿದೆ.

    ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವಂತಹ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸಂಬAಧಪಟ್ಟ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago