ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ರೂ. ವಂಚನೆ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ – vishwanews24

Featured, ಉಡುಪಿ

ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ರೂ. ವಂಚನೆ ಪ್ರಕರಣ: ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ವಕ್ಕಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪುವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಾರ್ಕೂರು ಮೂಲದ ನಾಗೇಶ್ ಪೂಜಾರಿ (31) ಎನ್ನುವಾತನಿಗೆ ಈ ಹಿಂದೆ ಬ್ರಹ್ಮಾವರ ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದಿದ್ದರು.

ಕುಂದಾಪುರ: ಪ್ರಮೋದ್‌ ಮಧ್ವರಾಜ್‌ ಅವರು ಯಾವುದೇ ಪಕ್ಷದಲ್ಲಿದ್ದರೂ ಇತರರನ್ನು ದ್ವೇಷಿಸದೆ ಇರುವ ವ್ಯಕ್ತಿತ್ವ : ಕೋಟ ಶ್ರೀನಿವಾಸ ಪೂಜಾರಿ – vishwanews24

 

ನಂತರ ಅಕ್ಟೋಬರ್ 16 ಬುಧವಾರದಂದು ಆರೋಪಿಯ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದ್ದು ಜಾಮೀನು ಅರ್ಜಿ ಮೇಲಿನ ಆದೇಶವನ್ನು ಅಕ್ಟೋಬರ್ 21 ಸೋಮವಾರಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಹಿಂದೂ ತಾಯಂದಿರ ಬಗ್ಗೆ ಅಸಭ್ಯವಾಗಿ ಮಾತನಾಡುವ ವಲಯ ಅರಣ್ಯಾಧಿಕಾರಿ ಸಂಜೀವ ಕಾಣೆಯೂರು ಇದು ಕೊನೆಯ ಎಚ್ಚರಕೆ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ – vishwanews24

Leave a Reply