Featured

ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ  ವಂಚನೆ ಪ್ರಕರಣ: ಆರೋಪಿ 3 ದಿನ ಪೊಲೀಸ್ ಕಸ್ಟಡಿಗೆ – vishwanews24

ಉಡುಪಿ: ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ  ವಂಚನೆ ಪ್ರಕರಣ: ಆರೋಪಿ 3 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ, ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಹಾಗೂ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ರದ್ಧು ಆದೇಶವಾದ ಬೆನ್ನಲ್ಲೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಸೆನ್ ಠಾಣೆ ಪೊಲೀಸರು ಮೈಸೂರಿನ ನಂಜನಗೂಡು ಬಳಿ ಬಂಧಿಸಿದ್ದಾರೆ.

ಬಾರ್ಕೂರು ಮೂಲದ ನಾಗೇಶ್ ಪೂಜಾರಿ (31) ಬಂಧಿತ ಆರೋಪಿ.

ಬಂಧಿತ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಹೆಚ್ಚಿನ ತನಿಖೆಗಾಗಿ 3 ದಿನಗಳ ಕಾಲ (ಅ.16) ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ಘಟನೆ ಹಿನ್ನೆಲೆ:
ದುಬೈನ ಫಾರ್ಚ್ಯೂನ್ ಗ್ರೂಫ್ ಆಫ್ ಹೋಟೆಲ್ಸ್ ಸಂಬಂಧಿತ ಹೋಟೆಲೊಂದಕ್ಕೆ ಉದ್ಯೋಗಕ್ಕೆ ಸೇರಿದ್ದ ನಾಗೇಶ್ ಪೂಜಾರಿಯು 2.5 ಕೋಟಿಗೂ ಅಧಿಕ ಹಣ ವಂಚಿಸಿದ್ದು ಈ ಬಗ್ಗೆ ಫಾರ್ಚ್ಯೂನ್ ಹೋಟೆಲ್ ಮ್ಯಾನೇಜರ್ ಸುನೀಲ್ ಕುಮಾರ್ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 25 ಲಕ್ಷಕ್ಕೂ ಹೆಚ್ಚಿನ ಹಣ ಅವ್ಯವಹಾರ ತನಿಖೆಯಾದ್ದರಿಂದ ಉಡುಪಿ ಸೆನ್ ಠಾಣೆಗೆ ಪ್ರಕರಣ ವರ್ಗಾವಣೆಗೊಂಡಿತ್ತು.

ಆರೋಪಿ ನಾಗೇಶ್ ಪೂಜಾರಿಯು ಹೈಕೋರ್ಟ್ ನಲ್ಲಿ ಎಫ್‌ಐಆರ್ ಮೇಲಿನ ತನಿಖೆ ಸ್ಥಗಿತಗೊಳಿಸಲು ವಕೀಲರ ಮೂಲಕ ಅರ್ಜಿ ದಾಖಲಿಸಿದ್ದು 2023 ಜುಲೈನಲ್ಲಿ ಆ ಅರ್ಜಿ ವಜಾಗೊಳಿಸಲಾಗಿತ್ತು. ಬಳಿಕ ಆರೋಪಿ ಕುಂದಾಪುರದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಹೈಕೋರ್ಟ್ ನ ಮತ್ತು ಸೆಶನ್ಸ್ ನ್ಯಾಯಾಲಯದ ಆದೇಶಗಳನ್ನು ಮರೆಮಾಚಿ ಬ್ರಹ್ಮಾವರದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಶರಣಾಗಿ ೨೦೨೩ರ ಆಗಸ್ಟ್ ತಿಂಗಳಿನಲ್ಲಿ ಆರೋಪಿ ಜಾಮೀನು ಪಡೆದುಕೊಂಡಿದ್ದ. ಈ ಜಾಮೀನು ಆದೇಶವನ್ನು ಸರ್ಕಾರ ಪ್ರಶ್ನಿಸಿ ಪರಿಷ್ಕೃತ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.

ಪ್ರಕರಣದ ವಿಚಾರಣೆಯನ್ನು ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಕೈಗೊಂಡಿದ್ದು, ಅಲ್ಲಿಯೂ ಜೆ.ಎಂ.ಎಫ್.ಸಿ ನ್ಯಾಯಾಲಯ ನೀಡಿದ ಜಾಮೀನು ರದ್ದುಗೊಳಿಸಿ ಆದೇಶ ನೀಡಲಾಗಿತ್ತು. ಈ ತೀರ್ಪಿನ ಬಳಿಕ ಆರೋಪಿ ತನ್ನ ಪರ ವಕೀಲರ ಮೂಲಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ. ಇದರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಾಧೀಶರಾದ ನಾಗಪ್ರಸನ್ನ ಅವರು ಜೆ.ಎಂ.ಎಫ್.ಸಿ ನ್ಯಾಯಾಲಯದ ನೀಡಿದ ಜಾಮೀನು ರದ್ದುಗೊಳಿಸಿದ್ದರು. ಫಾರ್ಚೂನ್ ಗ್ರೂಫ್ ಪರ ಹೈಕೋರ್ಟ್ ನ್ಯಾಯವಾದಿ ಪ್ರಸನ್ನ ಶೆಟ್ಟಿ ಕೆರೆಬೆಟ್ಟು ವಾದ ಮಂಡಿಸಿದ್ದರು.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಕಳೆದ ಏಳೆಂಟು ವರ್ಷಗಳ ಹಿಂದೆ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ದುಬೈ ಮತ್ತು ಭಾರತದ ಆಡಳಿತ ನಿರ್ದೇಶಕ ವಿ. ಪ್ರವೀಣ್ ಕುಮಾರ್ ಶೆಟ್ಟಿಯವರು ಸಂದರ್ಶನ ನಡೆಸಿ ಅಲ್ಲಿನ ಹೋಟೆಲಿಗೆ ಅಕೌಂಟೆಂಟ್ ಆಗಿ ಉದ್ಯೋಗಕ್ಕೆ ಸೇರಿದ್ದ ನಾಗೇಶ್ ಪೂಜಾರಿಯು 2022 ಮುಖ್ಯ ಅಕೌಂಟೆಂಟ್ ಆಗಿ ಬಡ್ತಿಯಾಗಿದ್ದು 2023ರಲ್ಲಿ ತನ್ನ ಮದುವೆಯ ಹಿನ್ನೆಲೆ ದುಬೈನಿಂದ ಊರಿಗೆ 3 ತಿಂಗಳ ರಜೆಯಲ್ಲಿ ಊರಿಗೆ ಬಂದಿದ್ದ. ಪಡೆದ ರಜೆ ಮುಗಿಯುವ ಹೊತ್ತಿಗೆ ಇನ್ನು 15 ದಿನಗಳ ಹೆಚ್ಚುವರಿ ರಜೆಯನ್ನು ಕೋರಿದ್ದು ದುಬೈನಲ್ಲಿ ಕೆಲಸದ ಒತ್ತಡ ಹೆಚ್ಚಿದ್ದರಿಂದ ರಜೆ ನಿರಾಕರಿಸಲಾಗಿತ್ತು.

ನಂತರ ಆರೋಪಿ ಇ-ಮೇಲ್ ಮುಖಾಂತರ ತನ್ನ ರಾಜೀನಾಮೆ ಪತ್ರವನ್ನು ಎಚ್.ಆರ್ ಗೆ ಕಳುಹಿಸಿದ್ದು ದಿಢೀರ್ ರಾಜೀನಾಮೆ, ಅಸಹಜ ವರ್ತನೆಯಿಂದ ಅನುಮಾನಗೊಂಡು ಆತ ಕೆಲಸ ಮಾಡಿಕೊಂಡಿದ್ದ ಹೋಟೆಲಿನ ಲೆಕ್ಕ ಪುಸ್ತಕಗಳನ್ನು ಹಾಗೂ ಕೆಲವು ನಗದು ವಹಿವಾಟುಗಳನ್ನು ಬ್ಯಾಂಕ್ ಸ್ಟೇಟ್ಮೆಂಟ್ ಜೊತೆ ಪರಿಶೀಲಿಸಿದಾಗ ಅಲ್ಲಿ ಆದಾಯ ಹೊರತಾಗಿಯೂ ದೊಡ್ಡ ಪ್ರಮಾಣದ ನಗದು ಕಾಣೆಯಾಗಿದ್ದು ತಿಳಿದುಬಂದಿತ್ತು. ಹೋಟೆಲಿನ ಆದಾಯದಲ್ಲಿ ಬಂದ ನಗದನ್ನು ಹೋಟೆಲ್‌ನ ಬ್ಯಾಂಕ್ ಖಾತೆಗೆ ಜಮೆ ಮಾಡದೆ ಭಾರತ ದೇಶದ ತನ್ನ ವೈಯುಕ್ತಿಕ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಲ್ಲದೆ ಮ್ಯಾನೇಜ್ಮೆಂಟ್ ನಿಯಮಿತ ಹಸ್ತಕ್ಷೇಪವನ್ನು ತಪ್ಪಿಸಲು ನಗದು ವಹಿವಾಟುಗಳಿಗೆ ನಕಲಿ ಜರನಲ್ ನಮೂದುಗಳನ್ನು ಸೃಷ್ಟಿಸಿದ್ದು ಖಾತ್ರಿಯಾಗಿದ್ದು ಹಂತಹಂತವಾಗಿ ಆರೋಪಿ ಭಾರತದ ರೂಪಾಯಿಗಳಲ್ಲಿ 2 ಕೋಟಿ 55 ಲಕ್ಷದ 63 ಸಾವಿರ ಹಣ ವಂಚಿಸಿದ್ದು ಬೆಳಕಿಗೆ ಬಂದಿತ್ತು. ಕೋಟ್ಯಾಂತರ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಎರಡು ಬಾರಿ ಜಾಮೀನು ರದ್ದುಗೊಂಡಾಗಲೂ ಪೊಲೀಸರಿಗೆ ಸಿಗದ ಆರೋಪಿ ತಲೆಮರೆಸಿಕೊಂಡಿದ್ದ.

ವಿಶೇಷ ಸರಕಾರಿ ಅಭಿಯೋಜಕರ ನೇಮಕ:
ನ್ಯಾಯಾಲಯದಲ್ಲಿ ಪ್ರಕರಣ ನಡೆಸಲು ವಿಶೇಷ ಸರಕಾರಿ ಅಭಿಯೋಜಕರಾಗಿ ಮಂಗಳೂರು ವಲಯದ ಕಾನೂನು ಅಧಿಕಾರಿ (ಹಿರಿಯ) ಶಿವಪ್ರಸಾದ್ ಆಳ್ವ ಅವರನ್ನು ನೇಮಿಸಿ ಸರಕಾರ ಇತ್ತೀಚೆಗೆ ಆದೇಶ ಮಾಡಿತ್ತು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago