ಉಡುಪಿ : ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಇದೀಗ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ.
ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಉಡುಪಿ ಸೆನ್ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಬಳಿಕ ಆರೋಪಿ ನಾಗೇಶ್ ಪೂಜಾರಿಯನ್ನು 3 ದಿನಗಳ ಕಾಲ ಕಸ್ಟಡಿಗೆ ಪಡೆದು ಅ.16ರಂದು ಜೆ.ಎಂ.ಎಫ್.ಸಿ. ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆದೇಶವನ್ನು ಅ.21ಕ್ಕೆ ನಿಗದಿಪಡಿಸಲಾಗಿತ್ತು
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…