ಉಡುಪಿ : ನಗರದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದಲ್ಲಿ ತಲವಾರು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚಿಂದ್ರ ಅವರಿಗೆ ದೂರು ಸಲ್ಲಿಸಿದರು.
ದುರ್ಗಾ ದೌಡ್ ನಲ್ಲಿ ಅಕ್ರಮವಾಗಿ ತಲವಾರು ಪ್ರದರ್ಶನ ಮಾಡುವುದರೊಂದಿಗೆ ಶ್ರೀಕಾಂತ್ ಶೆಟ್ಟಿ ಮತ್ತು ಕಾಜಲ್ ಹಿಂದುಸ್ತಾನಿ ಪ್ರಚೋದನಕಾರಿಯಾಗಿ ಮಾತನಾಡಿ ಉಡುಪಿಯ ಶಾಂತಿಯುತ ವಾತಾವರಣ ಕೆಡಿಸಲು ಯತ್ನಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಘಟನೆಯು ಪೂರ್ವ ಯೋಜಿತವಾಗಿದ್ದು ಮತ್ತು ಸಮಾಜದ ನಿರ್ದಿಷ್ಟ ವರ್ಗದ ಜನರ ವಿರುದ್ದ ಅಪರಾಧ ಎಸಗಲು ಪ್ರೇರೇಪಿಸುವಂತಿತ್ತು ಎಂದು ಸಂಘಟನೆಗಳು ಆರೋಪಿಸಿವೆ.
ಮಲ್ಪೆ: ಬಲೆಗೆ ಬಿದ್ದ ಬೃಹತ್ ಗಾತ್ರದ ಕಾರ್ಗಿಲ್ ಮೀನು – Vishwanews24
ಈ ಸಂದರ್ಭದಲ್ಲಿ ದಲಿತ ದಮನಿತ ಹೋರಾಟ ಸಮಿತಿಯ ಶ್ಯಾಮರಾಜ್ ಬಿರ್ತಿ, ದಲಿತ ಸಂಘರ್ಷ ಸಮಿತಿಯ ಸುಂದರ್ ಮಾಸ್ತರ್,ಎಪಿಸಿಆರ್ ಜಿಲ್ಲಾ ಸಂಚಾಲಕ ಹುಸೇನ್ ಕೋಡಿಬೆಂಗ್ರೆ, ಸುನ್ನಿ ಸಂಯುಕ್ತ ಜಮಾಅತಿನ ಜಿಲ್ಲಾಧ್ಯಕ್ಷ ಅಬುಬಕ್ಕರ್ ನೇಜಾರ್, ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ, ಕ್ರೈಸ ಮುಖಂಡ ಚಾರ್ಲ್ಸ್ ಅಂಬ್ಲರ್, ವಿಲಿಯಂ ಮಾರ್ಟಿಸ್, ಸಿ.ಪಿ.ಎಮ್ ಮುಖಂಡ ಬಾಲಕೃಷ್ಣ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಫಣಿರಾಜ್,ಸಾಲಿಡಾರಿಟಿಯ ಅಫ್ವಾನ್ ಹೂಡೆ, ಮಂಜುನಾಥ್ ಬಾಳ್ಕುದ್ರು,ಮುಸ್ಲಿಮ್ ಒಕ್ಕೂಟದ ಉಪಾಧ್ಯಕ್ಷ ಇದ್ರಿಸ್ ಹೂಡೆ, ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…