Featured

ಉಡುಪಿ: ದುರ್ಗಾ ದೌಡ್‌ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಹಾಗೂ ಪ್ರಚೋದನಕಾರಿ ಭಾಷಣ : ಪ್ರಕರಣ ದಾಖಲು – Vishwanews24

ಉಡುಪಿ: ದುರ್ಗಾ ದೌಡ್‌ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಹಾಗೂ ಪ್ರಚೋದನಕಾರಿ ಭಾಷಣ : ಪ್ರಕರಣ ದಾಖಲು

ಉಡುಪಿ: ಉಡುಪಿಯಲ್ಲಿ ನಡೆದ ದುರ್ಗಾ ದೌಡ್‌ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಹಾಗೂ ಸಾರ್ವಜನಿಕ ಸಭೆಯಲ್ಲಿ ಮಾಡಿರುವ ಪ್ರಚೋದನಕಾರಿ ಭಾಷಣದ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿವೆ.

ಅ. 2ರಂದು ಅಪರಾಹ್ನ 3.30ಕ್ಕೆ ಕಡಿಯಾಳಿಯಿಂದ ಹೊರಟು ಉಡುಪಿ ನಗರದಲ್ಲಿ ಸಾಗಿದ ದುರ್ಗಾ ದೌಡ್‌ ಮೆರವಣಿಗೆಯಲ್ಲಿ ಸುಮಾರು 10-15 ಮಂದಿಯ ಗುಂಪು ಅಕ್ರಮವಾಗಿ ಮಾರಕಾಸ್ತ್ರವಾದ ತಲವಾರು ಪ್ರದರ್ಶಿಸಿದ್ದು, ತ್ರಿವೇಣಿ ಸರ್ಕಲ್‌ ಬಳಿ ಆಗಮಿಸಿ ಮೆರವಣಿಗೆಯಲ್ಲಿ ತಲವಾರು ಹಿಡಿದು ತಾಲೀಮು ನಡೆಸಿ ಭಯ ಹುಟ್ಟಿಸುವ ದುಷ್ಕೃತ್ಯ ಎಸಗಿದ್ದಾರೆ ಎಂದು ಹುಸೈನ್‌ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣಕಾಸಿನ ವಿಷಯದಲ್ಲಿ ಎಚ್ಚರವಹಿಸಿ …ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564..

ಅದೇ ದಿನ ಸಂಜೆ 6 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್‌ ಸ್ಥಳದ ಎದುರು ಇರುವ ಖಾಸಗಿ ಸ್ಥಳದಲ್ಲಿ ನಡೆದ ದುರ್ಗಾ ದೌಡ್‌ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮುಖಂಡ ಶ್ರೀಕಾಂತ್‌ ಶೆಟ್ಟಿ ಕಾರ್ಕಳ ಹಾಗೂ ಕಾಜಲ್‌ ಹಿಂದೂಸ್ಥಾನಿ ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ದೂರಲಾಗಿದೆ.

ಹಿಂದೂಗಳ ಮನೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟು ಪೂಜೆ ಮಾಡಿ ಅದನ್ನು ಬಳಸಬೇಕು ಹಾಗೂ ಸಣ್ಣ ಸಣ್ಣ ಹೆಣ್ಣು ಮಕ್ಕಳನ್ನು ಮುಸ್ಲಿಂ ಸಮುದಾಯದವರು ಲವ್‌ ಜಿಹಾದ್‌ ನಡೆಸಿ ವಂಚಿಸುತ್ತಿದ್ದಾರೆ. ಈ ಲವ್‌ ಜಿಹಾದ್‌ ಪ್ರಚೋದನೆಯಾಗಿ ಬಾಲಿವುಡ್‌ ಕಾರ್ಯಾಚರಿಸುತ್ತಿದೆ ಎಂದು ಒಂದು ಸಮುದಾಯವನ್ನು ದೂಷಿಸಿ ಇನ್ನೊಂದು ಧರ್ಮದವರೊಂದಿಗೆ ದ್ವೇಷ ಭಾವನೆ ಹುಟ್ಟುವಂತೆ ಇವರು ಭಾಷಣದಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಹಣಕಾಸಿನ ವಿಷಯದಲ್ಲಿ ಎಚ್ಚರವಹಿಸಿ …ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564..

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

17 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago