ಉಡುಪಿ: ಸಮುದ್ರ ಮಧ್ಯೆ 25 ಮಂದಿಯ ತಂಡವೊಂದು ಮೀನುಗಾರರ ಸಹಿತ ಬೋಟನ್ನು ಅಪಹರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮೀನು ಹಾಗೂ ಡಿಸೇಲ್ ಲೂಟಿ ಮಾಡಿದ ಘಟನೆ ಫೆಬ್ರವರಿ 27 ರಂದು ನಡೆದಿದ್ದು ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫೆಬ್ರವರಿ 19ರಂದು ಮಲ್ಪೆಯ ಚೇತನ್ ಸಾಲಿಯಾನ್ ಎಂಬವರ ಕೃಷ್ಣನಂದನ ಎಂಬ ಲೈಲಾಂಡ್ ಬೋಟ್ ನಲ್ಲಿ ಆಳಸಮುದ್ರ ಮೀನುಗಾರಿಕೆ ನಡೆಸಲು ನಾಗರಾಜ್ ಹರಿಕಾಂತ, ನಾಗರಾಜ್ ಎಚ್ ಹರಿಕಾಂತ, ಅರುಣ ಹರಿಕಾಂತ ಅಂಕೋಲ, ಅಶೋಕ ಕುಮಟ, ಕಾರ್ತಿಕ್ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಮತ್ತು ಸುಬ್ರಹ್ಮಣ್ಯ ಖಾರ್ವಿ ಎಂಬವರು ತೆರಳಿದ್ದರು.
ಫೆ. 27 ರಂದು ಮೀನುಗಾರಿಕೆ ಮುಗಿಸಿ ಲಕ್ಷಾಂತ ರೂ ಮೌಲ್ಯದ ಮೀನು ತುಂಬಿಸಿಕೊಂಡು ಮಲ್ಪೆ ಕಡೆಗೆ ಬರುತ್ತಿರುವಾಗ ಬೋಟ್ ನ ಬಲೆ ಫ್ಯಾನ್ ಗೆ ಬಿದ್ದು ಬೋಟ್ ಬಂದ್ ಆಗಿ ನಿಂತಿದೆ ಎನ್ನಲಾಗಿದೆ. ಈ ವೇಳೆ 25 ಜನ ಮಂದಿ ಆಕ್ರಮಣ ಮಾಡಿ ಬೋಟನ್ನು ತೀರಕ್ಕೆ ಎಳೆದುಕೊಂಡು ಹೋಗಿ ಮೀನುಗಾರರನ್ನು ಅಪಹರಿಸಿ ಬೋಟಿನಲ್ಲಿದ್ದ ಸುಮಾರು 8 ಲಕ್ಷ ರೂ ಮೌಲ್ಯದ ಮೀನು ಮತ್ತು ಬೋಟ್ ಗೆ ತುಂಬಿಸಿದ 5,76,700 ಲೀಟರ್ ಡಿಸೇಲ್ ಕಳ್ಳತನ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಇಷ್ಟೇ ಅಲ್ಲದೇ ಬೋಟ್ ನಲ್ಲಿದ 7 ಜನ ಒತ್ತೆಯಾಳಾಗಿ ಇರಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿ, ಮೀನುಗಾರರನ್ನು ಅಪರಿಚಿತ ಅಪಹರಣಕಾರರು ಬಂಧನದಲ್ಲಿರಿಸಿ ಅವರಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿಲಾಗಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…