ಉಡುಪಿ : ದೇವರನ್ನೇ ಬಿಡ್ಲಿಲ್ಲ, ಇನ್ನು ಮನುಷ್ಯರು ಯಾವ ಲೆಕ್ಕ? ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು : ಸುನಿಲ್ ಕುಮಾರ್ ವಿರುದ್ಧ ಹೆಬ್ಬಾಳಕರ್ ವಾಗ್ದಾಳಿ – vishwanews24

Featured, ಉಡುಪಿ

ದೇವರ ಹೆಸರಿನಲ್ಲಿ ರಾಜಕೀಯ ; ಶಾಸಕ ಸುನಿಲ್ ಕುಮಾರ್  2 ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ  : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ‌ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಆರೋಪಿಸಿದರು.

ವಿದ್ಯುತ್ ಶಾಕ್​ : ಯುವ ಇಂಜಿನಿಯರ್ ಸಾವು – vishwanews24

ಈಗಲಾದರೂ ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ?. ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ. ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಹೇಳಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಟೋಲ್ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ :ಕಂಚಿನಡ್ಕ ಬಳಿ ಟೋಲ್ ಗೇಟ್ ಗೆ ವಿರೋಧವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ನಾಲ್ಕು ಕಿಲೋಮೀಟರ್ ನಲ್ಲಿ ಎರಡು ಟೋಲ್ ಗೇಟ್ ಬಂದಿರುವುದು ಬಹಳ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿ, ಎಸ್ ಪಿ, ಇತರ ಅಧಿಕಾರಿಗಳ ಜೊತೆ ನಾನು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸುವೆ. ಅಲ್ಲಿರುವ ಸಮಸ್ಯೆ ಏನು ಎಂದು ನೋಡುತ್ತೇನೆ. ಎರಡು ಕಡೆ ಸುಂಕ ಕೊಡುವುದು ಜನರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

ಉಡುಪಿ : ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಹಸಿವನ್ನು ನೀಗಿಸುತ್ತಿದೆ  : ಲಕ್ಷ್ಮೀ ಹೆಬ್ಬಾಳ್ಕರ್ – vishwanews24

 

Leave a Reply