ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ. ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಆರೋಪಿಸಿದರು.
ಈಗಲಾದರೂ ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ?. ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ. ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಹೇಳಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಟೋಲ್ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ :ಕಂಚಿನಡ್ಕ ಬಳಿ ಟೋಲ್ ಗೇಟ್ ಗೆ ವಿರೋಧವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ನಾಲ್ಕು ಕಿಲೋಮೀಟರ್ ನಲ್ಲಿ ಎರಡು ಟೋಲ್ ಗೇಟ್ ಬಂದಿರುವುದು ಬಹಳ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿ, ಎಸ್ ಪಿ, ಇತರ ಅಧಿಕಾರಿಗಳ ಜೊತೆ ನಾನು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸುವೆ. ಅಲ್ಲಿರುವ ಸಮಸ್ಯೆ ಏನು ಎಂದು ನೋಡುತ್ತೇನೆ. ಎರಡು ಕಡೆ ಸುಂಕ ಕೊಡುವುದು ಜನರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…