ಉಡುಪಿ : ಭಾರತ ದೇಶದ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿವಾರಣೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ಶ್ರೀ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಬೈಂದೂರು ವಿಧಾನಸಭಾ ಕ್ಷೇತ್ರದ ತಿರುಗಾಲು, ಬಿಜೂರು, ಶಿರೂರು, ಎಳಜಿ ಮುಂತಾದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಿ ಮತದಾರರಿಗೆ ಮನವಿ ಮಾಡಿದರು.
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬಡವರ ಮನೆಗಳಲ್ಲಿ ಗ್ಯಾಸ್ ಮೂಲಕ ಅಡುಗೆ ಮಾಡಲು ಅವಕಾಶವಾಯಿತು. 11 ಕೋಟಿ 50 ಲಕ್ಷ ಶೌಚಾಲಯ ಭಾರತದಲ್ಲಿ ನಿರ್ಮಾಣವಾಯಿತು. ದೀನದಯಾಳ್ ಯೋಜನೆಯ ಮೂಲಕ ಕಡು ಬಡವರ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಯಿತು. ಇದೆಲ್ಲದಕ್ಕಿಂತ ದೇಶದ 146 ಕೋಟಿ ಜನರಿಗೆ ಪ್ರಧಾನಿ ಮೋದಿ ಬದುಕಿನ ಗ್ಯಾರಂಟಿ ಕಟ್ಟಿಕೊಟ್ಟರು. ವಿಶ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವನ್ನಾಗಿ ಮೂಡಿಬರುತ್ತದೆ. ದೇಶದ ಮುಂದಿನ ಜನಾಂಗ ನೆಮ್ಮದಿಯಿಂದ ಬದುಕಲು ಬಿಜೆಪಿಗೆ ಮತ ನೀಡಿ ಎಂದು ಕೋಟ ವಿವಿಧಡೆಯಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ ಗಂಟೆ ಹೊಳೆ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷರಾದ ದೀಪಕ್ ಶೆಟ್ಟಿ ಮತ್ತು ಉಡುಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರಾದ ಪೃಥ್ವಿರಾಜ ಶೆಟ್ಟಿ ಬಿಲ್ಲಾಡಿ ಮತ್ತು ಮುಂತಾದ ಮುಖಂಡರು ಉಪಸ್ಥಿತರಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…