ಉಡುಪಿ: ದೋಣಿಯಿಂದ ಸಮುದ್ರಕ್ಕೆ ಬಿದ್ದ ಮೀನುಗಾರ : ಮುಳುಗು ತಜ್ಞ ಈಶ್ವರ್ ಮಲ್ಪೆರಿಂದ ರಕ್ಷಣೆ – Vishwanews24
ಉಡುಪಿ: ದೋಣಿಯಿಂದ ಸಮುದ್ರಕ್ಕೆ ಬಿದ್ದ ಮೀನುಗಾರ : ಮುಳುಗು ತಜ್ಞ ಈಶ್ವರ್ ಮಲ್ಪೆರಿಂದ ರಕ್ಷಣೆ
ಉಡುಪಿ,: ಮಲ್ಪೆ ಮೀನುಗಾರಿಕಾ ಬಂದರಿನ ಪಶ್ಚಿಮ ಭಾಗದ ಜೆಟ್ಟಿಯಲ್ಲಿ ಲಂಗರು ಹಾಕಿದ್ದ ದೋಣಿಯಿಂದ ಸಮುದ್ರಕ್ಕೆ ಬಿದ್ದ ಮೀನುಗಾರನನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ್ದಾರೆ.
ಒಡಿಶಾ ಮೂಲದ ಪ್ರಜ್ವಲ್ ಅವರನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ರಕ್ಷಿಸಿದ್ದಾರೆ.
ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಮುಂದಿನ ದಿನಗಳಲ್ಲಿ ಬ್ರಹ್ಮಾವರ ರುಡ್ಸೆಟ್ನಲ್ಲಿ ಉಚಿತ ತರಬೇತಿ – Vishwanews24
ಇನ್ನು ಆಳ ಸಮುದ್ರ ಮೀನುಗಾರಿಕೆ ಬೋಟ್ನಲ್ಲಿ ಪ್ರಜ್ವಲ್ ಕೆಲಸ ಮಾಡುತ್ತಿದ್ದು, ಅಕ್ಟೋಬರ್ 10ರ ಸೋಮವಾರ ಸಂಜೆ ಒಂದು ದೋಣಿಯಿಂದ ಇನ್ನೊಂದು ದೋಣಿಗೆ ಹೋಗುತ್ತಿದ್ದಾಗ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದು, ಅವರನ್ನು ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಹಗ್ಗದ ಸಹಾಯದಿಂದ ಮೇಲೆತ್ತಿದ್ದಾರೆ.

