ಉಡುಪಿ, : ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಅವರ ಅಂಗರಕ್ಷಕನಿಗೆ ಗಾಯವಾದ ಘಟನೆ ನಡೆದಿದೆ.
ಕೊಡವೂರು ನಿವಾಸಿ ಗಣೇಶ್ ಗಾಯಗೊಂಡವರು. ಅಕ್ಟೋಬರ್ 16ರಂದು ಕರ್ತವ್ಯದ ಹಿನ್ನೆಲೆಯಲ್ಲಿ ಅಜ್ಜರಕಾಡುವಿನಲ್ಲಿರುವ ಯಶ್‌ಪಾಲ್ ಸುವರ್ಣ ಅವರ ಮನೆಗೆ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದರು. ಕರಾವಳಿ ಬೈಪಾಸ್ ಸರ್ವೀಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಅಂಬಲಪಾಡಿ ಜಂಕ್ಷನ್ ಕಡೆಯಿಂದ ಕರಾವಳಿ ಕಡೆಗೆ ಬರುತ್ತಿದ್ದ ರಾಹಿಲ್ ಅನ್ವರ್ ಅವರ ಸ್ಕೂಟರ್ ಢಿಕ್ಕಿ ಹೊಡೆದಿದೆ. ರಾಹುಲ್ ಅವರು ಯಾವುದೇ ಸೂಚನೆ ನೀಡದೆ ಏಕಾಏಕಿ ಸರ್ವಿಸ್ ರಸ್ತೆಗೆ ಬಂದು ಢಿಕ್ಕಿ ಹೊಡೆದಿದ್ದು, ಇದರಿಂದಾಗಿ ಗಣೇಶ್ ಅವರಿಗೆ ಮೂಳೆ ಮುರಿತ ಮತ್ತು ರಕ್ತಗಾಯ ಉಂಟಾಗಿದೆ.
ಗಾಯಾಳು ಗಣೇಶ್ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…