ಉಡುಪಿ  : ದ್ವಿತೀಯ ಪಿಯು ಪರೀಕ್ಷೆ – ಎಲ್ಲೆಡೆ ಸಿಸಿಟಿವಿ ಅಳವಡಿಕೆ : ಸದಾಶಿವ ಪ್ರಭು -Vishwanews24

ಉಡುಪಿ  : ಮಾರ್ಚ್ 4 ರಿಂದ 23 ರ ವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಡೆಯಬಹುದಾದ ಯಾವುದೇ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ, ಪ್ರಶ್ನೆ ಪತ್ರಿಕೆ ಇಡಲಾಗುವ ಜಿಲ್ಲಾ ಖಜಾನೆ ಸೇರಿದಂತೆ, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.

ಅವರು ಗುರುವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು 27 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 15100 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು, ಜಿಲ್ಲೆಯ ತಹಸೀಲ್ದಾರ್‍ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 8 ತಂಡಗಳನ್ನು ರಚಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸಾಗಿಸುವ ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ತಲುಪಿಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸದಾಶಿವ ಪ್ರಭು ತಿಳಿಸಿದರು.

ಜಿಲ್ಲಾ ಖಜಾನೆಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಮತ್ತು ಬಾರ್‍ಕೋಡ್ ರೀಡರ್‍ಗಳನ್ನು ಅಳವಡಿಸಲಾಗುತ್ತದೆ. ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಅಂಚೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಲು ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ಜಾಗೃತ ತಂಡಗಳನ್ನು ನೇಮಿಸಲಾಗಿದೆ.

ಜಿಲ್ಲೆಯಲ್ಲಿ ಈ ವರ್ಷ ಒಟ್ಟು 15,100 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ 13,802 ಹೊಸದಾಗಿ, 493 ಪುನಾರಾವರ್ತನೆ, 805 ಖಾಸಗಿಯಾಗಿ ಪರೀಕ್ಷೆ ಬರೆಯುವವರು. ಒಟ್ಟು 7733 ಹೆಣ್ಣು ಮಕ್ಕಳು ಮತ್ತು 7367 ಗಂಡು ಮಕ್ಕಳು ಪರೀಕ್ಷೆ ಬರೆಯಲಿದ್ದು, ಸೈನ್ಸ್, ಆಟ್ರ್ಸ್ ಮತ್ತು ಕಾಮರ್ಸ್ ವಿಭಾಗದಲ್ಲಿ ಕ್ರಮವಾಗಿ 5075, 1789 ಮತ್ತು 8236 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರವಹಿಸುವಂತೆ ಹಾಗೂ ಪರೀಕ್ಷಾ ಕೆಲಸಗಳಿಗೆ ನಿಯುಕ್ತಿಗೊಳಿಸಿದ ಎಲ್ಲ ಅಧಿಕಾರಿಗಳೂ ಪರೀಕ್ಷೆಗಳು ಆರಂಭದಿಂದ ಮುಕ್ತಾಯವಾಗುವವರೆಗೆ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು..

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

24 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

24 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

24 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 day ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 day ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

1 day ago