ಉಡುಪಿ : ಮಾರ್ಚ್ 4 ರಿಂದ 23 ರ ವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಡೆಯಬಹುದಾದ ಯಾವುದೇ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ, ಪ್ರಶ್ನೆ ಪತ್ರಿಕೆ ಇಡಲಾಗುವ ಜಿಲ್ಲಾ ಖಜಾನೆ ಸೇರಿದಂತೆ, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
ಅವರು ಗುರುವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು 27 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 15100 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು, ಜಿಲ್ಲೆಯ ತಹಸೀಲ್ದಾರ್‍ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 8 ತಂಡಗಳನ್ನು ರಚಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸಾಗಿಸುವ ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆ ತಲುಪಿಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸದಾಶಿವ ಪ್ರಭು ತಿಳಿಸಿದರು.
ಜಿಲ್ಲಾ ಖಜಾನೆಯಲ್ಲಿ ಬಯೋಮೆಟ್ರಿಕ್ ಹಾಜರಾತಿ ಮತ್ತು ಬಾರ್‍ಕೋಡ್ ರೀಡರ್‍ಗಳನ್ನು ಅಳವಡಿಸಲಾಗುತ್ತದೆ. ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಅಂಚೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಲು ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ಜಾಗೃತ ತಂಡಗಳನ್ನು ನೇಮಿಸಲಾಗಿದೆ.
ಜಿಲ್ಲೆಯಲ್ಲಿ ಈ ವರ್ಷ ಒಟ್ಟು 15,100 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇದರಲ್ಲಿ 13,802 ಹೊಸದಾಗಿ, 493 ಪುನಾರಾವರ್ತನೆ, 805 ಖಾಸಗಿಯಾಗಿ ಪರೀಕ್ಷೆ ಬರೆಯುವವರು. ಒಟ್ಟು 7733 ಹೆಣ್ಣು ಮಕ್ಕಳು ಮತ್ತು 7367 ಗಂಡು ಮಕ್ಕಳು ಪರೀಕ್ಷೆ ಬರೆಯಲಿದ್ದು, ಸೈನ್ಸ್, ಆಟ್ರ್ಸ್ ಮತ್ತು ಕಾಮರ್ಸ್ ವಿಭಾಗದಲ್ಲಿ ಕ್ರಮವಾಗಿ 5075, 1789 ಮತ್ತು 8236 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರವಹಿಸುವಂತೆ ಹಾಗೂ ಪರೀಕ್ಷಾ ಕೆಲಸಗಳಿಗೆ ನಿಯುಕ್ತಿಗೊಳಿಸಿದ ಎಲ್ಲ ಅಧಿಕಾರಿಗಳೂ ಪರೀಕ್ಷೆಗಳು ಆರಂಭದಿಂದ ಮುಕ್ತಾಯವಾಗುವವರೆಗೆ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು..
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…