ಉಡುಪಿ/ ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ನಗರ ಮತ್ತು ಗ್ರಾಮೀಣ ಜನತೆಗೆ ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ನೀರು ಸರಬರಾಜು ಮಾಡಬೇಕು. ಆವಶ್ಯಕತೆಗೆ ತಕ್ಕಂತೆ ಸರಕಾರ ಅನುದಾನ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ತಿಳಿಸಿದ್ದಾರೆ.
ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆ ಮುಂದುವರಿಸುವಂತೆ ಸೂಚನೆ ನೀಡಿದ ಸಿಎಂ, ಅನುದಾನಕ್ಕೆ ಕೊರತೆ ಇಲ್ಲ. ಜನರಿಗೆ ಯಾವುದೇ ತೊಂದರೆ ಎದುರಾಗದಂತೆ ಎಚ್ಚರ ವಹಿಸಬೇಕು. ಮಳೆ ಸುರಿದಿದೆ ಅಂದ ಮಾತ್ರಕ್ಕೆ ಕುಡಿಯುವ ನೀರು ಒಮ್ಮೆಲೆ ಸಿಗಲು ಸಾಧ್ಯವಿಲ್ಲ . ಹೀಗಾಗಿ ಲಭ್ಯವಿರುವ ನೀರನ್ನು ಬಳಸುವಂತೆ ಸೂಚಿಸಿದರು.
ಉಡುಪಿ ಜಿಲ್ಲೆಯ 58 ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಪ್ರಸ್ತುತ ಹೆಚ್ಚುವರಿಯಾಗಿ ಯಾವ ಗ್ರಾಮಗಳಿಂದಲೂ ನೀರಿನ ಸಮಸ್ಯೆಯ ಬಗ್ಗೆ ದೂರುಗಳು ಬಂದಿಲ್ಲ. ಈ ನಡುವೆ ಮಳೆ ಆರಂಭಗೊಂಡ ಕಾರಣ ಮುಂದಿನ ದಿನದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದು ಎಂದು ಜಿ.ಪಂ. ಸಿಇಒ ಪ್ರಸನ್ನ ಎಚ್. ತಿಳಿಸಿದರು
ದ.ಕ ಜಿಲ್ಲೆಯ ಸ್ಥಿತಿಗತಿ ವಿವರಣೆ ನೀಡಿದ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಜಿಲ್ಲೆಯಲ್ಲಿ ಜೂ. 8ರ ಬಳಿಕ ಉತ್ತಮ ಮಳೆಯಾಗುತ್ತಿದೆ. ತುಂಬೆ ಡ್ಯಾಂನಲ್ಲಿ ನೀರಿನ ಮಟ್ಟ 4.6 ಮೀ. ಹಾಗೂ ಎಎಂಆರ್ ಡ್ಯಾಂನಲ್ಲಿ 18 ಮೀ.ಗೆ ಏರಿಕೆಯಾಗಿದೆ. ಹಾಗಾಗಿ ನೀರಿಗೆ ಸದ್ಯ ಸಮಸ್ಯೆ ಇಲ್ಲ, ಈಗಾಗಲೇ ಮಂಗಳೂರು ನಗರಕ್ಕೆ ನೀರಿನ ರೇಷನಿಂಗ್ ನಿಲ್ಲಿಸಲಾಗಿದೆ. ಎತ್ತರದ ಪ್ರದೇಶಗಳಲ್ಲಿ 13 ಟ್ಯಾಂಕರ್ ಮೂಲಕ ನೀರಿನ ವಿತರಣೆ ಮಾಡಲಾಗುತ್ತಿದೆ ಎಂದರು.
ಗ್ರಾಮೀಣ ಭಾಗದ 22 ಗ್ರಾಮಗಳ ಪೈಕಿ 7 ಕಡೆ ಖಾಸಗಿ ಬೋರ್‌ವೆಲ್‌ಗಳನ್ನು ಪಡೆದುಕೊಂಡು ನೀರು ಪೂರೈಕೆ ಮಾಡಲಾಗುತ್ತಿದೆ, ಉಳಿದ 15 ಕಡೆ ಸರಕಾರದಿಂದ ಸಿಕ್ಕಿರುವ 1 ಕೋಟಿ ರೂ. ಅನುದಾನ ಹಾಗೂ ಜಿಲ್ಲಾಡಳಿತದಿಂದ 30 ಲಕ್ಷ ರೂ. ಸೇರಿಸಿಕೊಂಡು ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ ಎಂದರು.
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…