Featured

ಉಡುಪಿ ,ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳಲ್ಲಿ ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಶೇ.50 ನಿರ್ಬಂಧ -Vishwanews24

ಉಡುಪಿ ,ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳಲ್ಲಿ ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಶೇ.50 ನಿರ್ಬಂಧ -Vishwanews24

ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಫೂಲ್ ಬಂದ್ ..

ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಲಸಿಕೆ ಅಭಿಯಾನ ಚುರುಕುಗೊಳಿಸಲು ಸರ್ಕಾರ ತಿರ್ಮಾನಿಸಿದ್ದು, ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್, ನೈಟ್ ಕರ್ಫ್ಯೂ ವಿಧಿಸುವುದಿಲ್ಲ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಆರೋಗ್ಯ ಇಲಾಖೆ ಮತ್ತಿತ್ತರ ಇಲಾಖಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಗಿಂತ ಸೋಂಕು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನ ಜಾಗೃತಿ ಮೂಡಿಸಲಾಗುವುದು ಎಂದರು.

ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯಿದೆ ಉಲ್ಲಂಘನೆ ಮಾಡಿದರೆ ಕ್ರಮ ಜರುಗಿಸಬೇಕು. ಕೈಗಾರಿಕಾ ಪ್ರದೇಶ ಮತ್ತು ಅಪಾರ್ಟ್‌ಮೆಂಟ್ ಗಳಲ್ಲಿ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಕೇಂದ್ರದಿಂದ ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ರಾಜ್ಯದಲ್ಲೂ ಕಟ್ಟುನಿಟ್ಟಿನ ಪರಿಪಾಲನೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.

ಕೋವಿಡ್‌ಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 20ರಷ್ಟು ಹಾಸಿಗೆ ಮೀಸಲಿಡಲಾಗಿದೆ. ಜಾತ್ರೆ ಗಳಿಗೆ ಬ್ರೇಕ್ ಹಾಕಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.

ಲಸಿಕೆ ಹಾಕುವ ಪ್ರಕ್ರಿಯೆಯನ್ನು ಹೆಚ್ಚಿಸಲು ಸೂಚನೆ ನೀಡಿದ್ದೇವೆ. ಸರ್ಕಾರವೇ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಸ್ಥಿತಿ ಸೃಷ್ಟಿಯಾಗಿದೆ. ಹೀಗಾಗಿ ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಿಸಲು ಕ್ರ‌ಮ ಕೈಗೊಳ್ಳಲಾಗಿದೆ. ಈಗಾಗಲೇ ಜಾತ್ರೆ, ಉತ್ಸವಗಳನ್ನು ನಿಯಂತ್ರಿಸಿದ್ದೇವೆ. ಶಾಲೆಗಳನ್ನು ಭೌತಿಕವಾಗಿ ನಡೆಸುವುದು ಬೇಡ ಎಂದೂ ನಿರ್ಧರಿಸಲಾಗಿದೆ ಎಂದು ರವಿಕುಮಾರ್ ಸ್ಪಷ್ಟಪಡಿಸಿದರು.

ಸಭೆಯ ನಂತರ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಬಿ ಬಿ ಎಂ ಪಿ ಸೇರಿದಂತೆ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್ ಗಳಲ್ಲಿ ಗರಿಷ್ಠ ಗ್ರಾಹಕ ಸಂಖ್ಯೆ ಶೇ 50 ಮೀರುವಂತಿಲ್ಲ.

ರಾಜ್ಯಾದ್ಯಂತ ಜಿಮ್ ಮತ್ತು ಸ್ವಿಮ್ಮಿಂಗ್ ಫೂಲ್ ಗಳನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಸಾರಿಗೆ ಬಸ್ ಗಳಲ್ಲಿ ನಿಗದಿತ ಆಸನದ ಮೀತಿ ಮೀರುವಂತಿಲ್ಲ. ರಾಜ್ಯಾದ್ಯಾಂತ ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ , ಯಾವುದೇ ರೀತಿಯ, ರ್ಯಾಲಿ, ಮುಷ್ಕರ ನಡೆಸುವಂತಿಲ್ಲ ಧಾರ್ಮಿಕ ಆಚರಣೆ, ಜಾತ್ರೆ ನಿಷೇಧ. ಏಪ್ರಿಲ್ 20ರ ವರೆಗೆ ಈ ಮಾರ್ಗಸೂಚಿ ಅನ್ವಯವಾಗಲಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago