Featured

ಉಡುಪಿ : ಧಾರ್ಮಿಕ ಸ್ಥಳಗಳಲ್ಲಿ ಸೇವೆಗಳಿಗೆ ಅನುಮತಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಧಾರ್ಮಿಕ ಸ್ಥಳಗಳಲ್ಲಿ ಸೇವೆಗಳಿಗೆ ಅನುಮತಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಹಾಗೂ ಸೋಂಕಿನ ಸರಪಳಿಯನ್ನು ಮುರಿಯಲು ಸರ್ಕಾರದ ನಿರ್ದೇಶನದಂತೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪರಿಣಾಮಕಾರಿ ಅನುಷ್ಟಾನದಿಂದಾಗಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿರುತ್ತದೆ.

ರಾಜ್ಯ ಸರ್ಕಾರದ ಆದೇಶದಂತೆ ಈ ಕೆಳಕಂಡ ಅಂಶಗಳನ್ನು ಸೇರ್ಪಡೆ ಮಾಡುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯವೆಂದು ಕಂಡುಬAದಿರುವ ನಿಟ್ಟಿನಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್ 144(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡAತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

ಜಿಲ್ಲೆಯ ಧಾರ್ಮಿಕ ಸ್ಥಳಗಳ ಕಾರ್ಯಚಟುವಟಿಕೆಗೆ ಸಂಬoಧಿಸಿದoತೆ ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವುದರೊಂದಿಗೆ ಮತ್ತು ಸಂಬoಧಪಟ್ಟ ಇಲಾಖೆಯಿಂದ ಹೊರಡಿಸಲಾದ ಎಸ್.ಓ.ಪಿ ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ಜುಲೈ 25 ರಿಂದ ಪೂಜಾ ಸ್ಥಳಗಳಿಗೆ ಸಂಬAಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಈ ಪೈಕಿ ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳು ಮತ್ತು ಸಭೆಗಳನ್ನು ನಡೆಸಲು ಅನುಮತಿ ಇರುವುದಿಲ್ಲ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಅಮ್ಯೂಸ್‌ಮೆಂಟ್ ಪಾರ್ಕ್ ಮತ್ತು ಅಂತಹ ಇತರ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಈ ಪೈಕಿ ಜಲಕ್ರೀಡೆ, ಜಲ ಸಂಬoಧಿತ ಸಾಹಸ ಚಟುವಟಿಕೆಗಳಿಗೆ ಅನುಮತಿ ಇರುವುದಿಲ್ಲ.

ಮೇಲಿನ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ಡಿಸಾಸ್ಟರ್ ಮ್ಯಾನೆಜ್‌ಮೆಂಟ್ ಆ್ಯಕ್ಟ್ 2005, ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆ್ಯಕ್ಟ್ 2020 ಮತ್ತು ಐ.ಪಿ.ಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago