ಉಡುಪಿ: ಉಡುಪಿಯ ಎಲ್ಲೂರು ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆವಿ ವಿದ್ಯುತ್ ಲೈನ್ ಯೋಜನೆಯಲ್ಲಿ ಸರಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಒತ್ತಾಯಿಸಿದ್ದಾರೆ.
ಈ ಯೋಜನೆಗೆ ಯಾರ ವಿರೋಧವೂ ಇಲ್ಲ, ಆದರೆ ರೈತರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಯೋಜನೆ ಅನುಷ್ಠಾನದ ಕುರಿತಾಗಿ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ರೈತರು ಆತಂಕದಲ್ಲಿದ್ದಾರೆ, ಕೃಷಿ ಭೂಮಿ ಹಾಗೂ ಸಮೃದ್ಧವಾಗಿ ಬೆಳೆದು ನಿಂತ ಕೃಷಿಗೆ ಹಾನಿಯಾಗದಂತೆ ಸರಕಾರಿ ಭೂಮಿಯಲ್ಲಿ ವಿದ್ಯುತ್ ಲೈನ್ ಮತ್ತು ಟವರ್ ಅಳವಡಿಸಬೇಕು ಎಂಬುದು ರೈತರ ಆಗ್ರಹ, ಅದ್ಯರಿಂದ ರೈತರ ಬೇಡಿಕೆಯಂತೆ ಕೃಷಿ ಭೂಮಿಗೆ ಹಾನಿಯಾಗದಂತೆ ಪರ್ಯಾಯ ಮಾರ್ಗವಾಗಿ ವಿದ್ಯತ್ ಲೈನ್ ಅಳವಡಿಕೆಯ ಬಗ್ಗೆ ಅಧಿಕಾರಿಗಳು ರೈತರೊಂದಿಗೆ ಮಾತುಕತೆ ನಡೆಸಿ ಯೋಜನೆಯಲ್ಲಿ ಬದಲಾವಣೆ ಮಾಡಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ, ಸರಕಾರ ಕಾರ್ಯಪ್ರವೃತ್ತವಾಗಬೇಕು ಎಂದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಇಂಧನ ಸಚಿವರು, ಈ ವಿಚಾರವಾಗಿ ಕೇಂದ್ರ ಸರಕಾರ ರಾಜ್ಯ ಸರಕಾರ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…