Featured

ಉಡುಪಿ : ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ನಕ್ಷೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಅನಾವರಣ -Vishwanews24

ಉಡುಪಿ : ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ನಕ್ಷೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಅನಾವರಣ -Vishwanews24

ಉಡುಪಿ: ಆಕಾಶದಲ್ಲಿ ನಕ್ಷತ್ರಗಳ ಚಲನೆಯನ್ನು ಗುರುತಿಸಬಹುದಾದ ಪ್ಲಾನಿಸ್ಪಿಯರ್ ಎಂಬ ನಕ್ಷೆಯನ್ನು ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉಡುಪಿಯಲ್ಲಿ ಅನಾವರಣಗೊಳಿಸಿದ್ದಾರೆ.

ಇದೇ ವೇಳೆ ಒಂದು ವರ್ಷ ಪೂರ್ಣಗೊಳಿಸಿರುವ ಪಿಎಎಸಿ (ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ) ವೆಬ್ ಸೈಟ್‌ಗೆ ಹಾಗೂ ಪ್ರೋತ್ಸಾಹ ನೀಡುತ್ತಿರುವ ತಂಡಕ್ಕೆ ಶ್ರೀಪಾದರು ಆಶೀರ್ವದಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪಿಎಎಸಿ ತನ್ನ ವೆಬ್ ಸೈಟ್ ಮೂಲಕ ಜನರಿಗೆ ತಲುಪಿ ಆದ ಬೆಳವಣಿಗೆಯ ಜೊತೆಗೆ ಪ್ಲಾನಿಸ್ಪಿಯರ್ ಅನ್ನು ಬಳಸುವ ವಿಧಾನವನ್ನು, ವಿದ್ಯಾರ್ಥಿಗಳ ಶ್ರಮದ ಕುರಿತು ಸಂಯೋಜಕರಾದ ಅತುಲ್ ಭಟ್ ಮಾಹಿತಿ ನೀಡಿದರು.

ಈ ಸಂದರ್ಭ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಘವೇಂದ್ರ ಎ., ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರತಿಭಾ ಸಿ. ಆಚಾರ್ಯ ಹಾಗೂ ಪಿಎಎಸಿ ವಿದ್ಯಾರ್ಥಿನಿ ಶುಭಶ್ರೀ ಶಣೈ ಉಪಸ್ಥಿತರಿದ್ದರು.

ಆಕಾಶದಲ್ಲಿ ನಕ್ಷತ್ರಗಳ ಚಲನೆಯನ್ನು ಗುರುತಿಸುವ ಹವ್ಯಾಸಿಗಳು ಅಥವಾ ಈ ಬಗ್ಗೆ ಮಾಹಿತಿ ಪಡೆಯ ಬೇಕು ಎನ್ನುವ ಆಸಕ್ತರು https://paac.ppc.ac.in/planisphere ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ಲಾನಿಸ್ಪಿಯರ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇದರಲ್ಲಿ ನಿಮಗೆ ಮಾಹಿತಿಯು ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಲಭ್ಯವಿದ್ದು ಅದನ್ನು ಪಿಎಎಸಿ ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

55 minutes ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 hour ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 hour ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

1 hour ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

2 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

2 hours ago