ಉಡುಪಿ: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸಮಗ್ರ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಹೆಬ್ರಿ ನಕ್ಸಲ್ ನಿಗ್ರಹ ಪಡೆಯ ಪೊಲೀಸ್ ನಿರೀಕ್ಷಕ ಸತೀಶ್ ಬಿ. ಎಸ್. ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಬೆಂಗಳೂರಿನ ರಾಜಭವನದಲ್ಲಿ ಪ್ರದಾನ ಮಾಡಿದರು.
ಜನರಿಂದ ಜೀರೋ ಕರಪ್ಟ್ ಎಂದು ಕರೆಸಿಕೊಂಡಿರುವ ಪೊಲೀಸ್ ನಿರೀಕ್ಷಕ ಸತೀಶ್ ಬಿ.ಎಸ್. ಅವರು ನಕ್ಸಲ್ ಪೀಡಿತ ಪುದೇಶಗಳಲ್ಲಿ ಅನೇಕ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಾನುರಾಗಿಯಾಗಿದ್ದಾರೆ. ನಾಡ್ರಾಲು ಗ್ರಾಮದ ತೆಂಗಮಾರು ಎಂಬಲ್ಲಿ ಕಾಡಿನ ನಡುವೆ ಗುಡಿಸಲಲ್ಲಿ ವಾಸಿಸುತ್ತಿದ್ದ ನಾರಾಯಣ ಗೌಡರಿಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ನಿವಾಸ ಮನೆಯನ್ನು ಹೆಬ್ರಿಯ ನಕ್ಸಲ್ ನಿಗ್ರಹ ದಳದ ಸಿಬ್ಬಂದಿ ಜತೆ ಸೇರಿ ಖರ್ಚು ವೆಚ್ಚ ಭರಿಸಿ ನಿರ್ಮಿಸಿಕೊಟ್ಟಿದ್ದಾರೆ.
ಇದಲ್ಲದೆ ಕೊಲೆ, ದರೋಡೆ, ಅತ್ಯಾಚಾರ, ನಕ್ಸಲ್ ಸಮಸ್ಯೆ, ಚುನಾವಣಾ ಬಂದೋಬಸ್, ಮಾದಕ ದ್ರವ್ಯ ನಿಗ್ರಹ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಚಾಣಾಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ್ದಕ್ಕೆ ಈ ಪದಕ ಒಲಿದಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…