ಉಡುಪಿ: ಉಡುಪಿಯ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿರುವ ಧರಣಿ ಆರ್ಕೆಡ್ ವಾಣಿಜ್ಯ ಕಟ್ಟಡವನ್ನು ನಿಯಮಾವಳಿಗಳನ್ನು ಗಾಳಿಗೆ ತೂರಿ ನಿರ್ಮಿಸಿದ್ದಲ್ಲದೇ ಇದೀಗ ಈ ವಿವಾದಿತ ಕಟ್ಟಡಕ್ಕೆ ಟ್ರೇಡ್ ಲೈಸನ್ಸನ್ನೂ ನೀಡುವ ಮೂಲಕ ನಗರಸಭೆ ಅಧಿಕಾರಿಗಳು ಭ್ರಷ್ಟಾಚಾರ ಎಸಗಿದ್ದಾರೆ ಎಂದು ದೂರುದಾರ ಮಹಮ್ಮದ್ ಹನೀಫ್ ಹೇಳಿದ್ದಾರೆ.
ಈ ಸಂಬಂಧ ಇಂದು ಸುದ್ದಿಗೋಷ್ಟಿ ನಡೆಸಿದ ಮಹಮ್ಮದ್ ಹನೀಫ್ ಧರಣಿ ಆರ್ಕೇಡ್ ಕಟ್ಟಡಕ್ಕೆ ಮೂರು ಮಹಡಿಯ ಅನುಮತಿ ಇಲ್ಲ.ಹೀಗಿದ್ದರೂ ಮೂರು ಮಹಡಿಯ ಕಟ್ಟಡ ನಿರ್ಮಿಸಲಾಗಿದೆ.ಈ ಸಂಬಂಧ ನಗರಸಭೆಗೆ ತಾನು ದೂರು ನೀಡಿದ್ದೆ.ಬಳಿಕ ನಗರಸಭೆಯವರು ಕಟ್ಟಡದ ಮಾಲಕರಿಗೆ ನೊಟೀಸು ನೀಡಿದ್ದರು.ಕಟ್ಟಡದ ಅಕ್ರಮ ಮಹಡಿಯನ್ನು ತೆರವುಗೊಳಿಸಲು ನಗರಭೆ ನೊಟೀಸು ನೀಡಿದ್ದರೂ ಮಾಲಕರು ನ್ಯಾಯಾಲಯಕ್ಕೆ ಹೋಗಿ ಸ್ಟೇ ತಂದಿದ್ದಾರೆ.
ವ್ಯಾಜ್ಯ ಕೋರ್ಟ್ ನಲ್ಲಿದ್ದರೂ ನಗರಸಭೆಯವರು ಕಂಪ್ಲೀಷನ್ ಗೆ ಅನುಮತಿ ನೀಡಿ ಟ್ರೇಡ್ ಲೈಸನ್ ಅನ್ನೂ ನೀಡಿದ್ದಾರೆ.ಇದು ಅಕ್ರಮ.ತಕ್ಷಣ ಕಟ್ಟಡದ ಟ್ರೇಡ್ ಲೈಸನ್ಸ್ ರದ್ದು ಮಾಡಿ ,ಕಟ್ಟಡ ತೆರವು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ದೂರುದಾರ ಮಹಮ್ಮದ್ ಹನೀಫ್ ಒತ್ತಾಯಿಸಿದ್ದಾರೆ
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…