Featured

ಉಡುಪಿ : ನಗರದಲ್ಲಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ -Vishwanews24

ಉಡುಪಿ : ನಗರದಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶಿವಮೊಗ್ಗ ನಿವಾಸಿಗಳಾದ ಫೈರೋಜ್ (20) ಮತ್ತು ಮೊಹ್ಮದ್ ಮೊಸೀನ್ (20) ಎಂದು ಗುರುತಿಸಲಾಗಿದೆ.

ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ ಉಡುಪಿ ಉಪ ವಿಭಾಗದ ಡಿವೈಎಸ್ಪಿ ಟಿ.ಆರ್. ಜೈಶಂಕರ್ ಅವರು ಖಚಿತ ಮಾಹಿತಿ ಹಿನ್ನೆಲೆ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಪಂದುಬೆಟ್ಟು ಎಂಬಲ್ಲಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ನವೆಂಬರ್ 7ರಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ರವರ ನಿರ್ದೇಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಚಂದ್ರರವರ ಮಾರ್ಗದರ್ಶನದಲ್ಲಿ, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಟಿ.ಆರ್. ಜೈಶಂಕರ್ ರವರು ಖಚಿತ ಮಾಹಿತಿ ಮೇರೆಗೆ ಡಿಸಿಐಬಿ ಸಿಬ್ಬಂದಿಯವರೊಂದಿಗೆ ಉಡುಪಿ ಪಂದುಬೆಟ್ಟು ಎಂಬಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ 1.450 ಕೆ.ಜಿ ಗಾಂಜಾ, 2 ಮೊಬೈಲ್ ಫೋನ್, ಗಾಂಜಾ ತೂಕ ಮಾಡುವ ಮಿಷನ್, ನಗದು ಹಣ, ಪೌಚ್ ಇತ್ಯಾದಿಗಳನ್ನು ಸ್ವಾಧೀನಪಡಿಸಿಕೊಂಡು ಉಡುಪಿ ನಗರ ಠಾಣೆಗೆ ಹಸ್ತಾಂತರಿಸಿದ್ದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 33,000/- ರೂಪಾಯಿ ಆಗಬಹುದು.

ಈ ಕಾರ್ಯಾಚರಣೆಯಲ್ಲಿ ಡಿ.ವೈ.ಎಸ್.ಪಿ., ಉಡುಪಿರವರಿಗೆ ಡಿ.ಸಿ.ಐ.ಬಿ ಘಟಕದ ಎಎಸ್ಐ ರವಿಚಂದ್ರ ಹಾಗೂ ಸಿಬ್ಬಂದಿಯವರಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಪೂಜಾರಿ ಹಾಗೂ ಚಾಲಕ ಶಾಂತಾರಾಮ ರವರು ಸಹಕರಿಸಿರುತ್ತಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago