Featured

ಉಡುಪಿ : ನಗರಸಭೆ ಅಧ್ಯಕ್ಷರಾಗಿ ಬಿಜೆಪಿ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಅವಿರೋಧ ಆಯ್ಕೆ – vishwanews24

ಉಡುಪಿ : ನಗರಸಭೆ ಅಧ್ಯಕ್ಷರಾಗಿ ಬಿಜೆಪಿ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಅವಿರೋಧ ಆಯ್ಕೆ

ಉಡುಪಿ : ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ‌ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್ ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿ ಡಾ.ರಾಯಪ್ಪ ಹಾಜರಿದ್ದರು.

ಒಟ್ಟು 35 ಸಂಖ್ಯಾಬಲ ಇರುವ ನಗರಸಭೆಯಲ್ಲಿ ಬಿಜೆಪಿ 32 ಹಾಗೂ ಕಾಂಗ್ರೆಸ್ 3 ಸದಸ್ಯರನ್ನು ಹೊಂದಿದೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

4 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

4 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

5 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

7 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

7 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

7 hours ago