ಉಡುಪಿ : ಉಡುಪಿ ನಗರಸಭೆಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್ ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿ ಡಾ.ರಾಯಪ್ಪ ಹಾಜರಿದ್ದರು.
ಒಟ್ಟು 35 ಸಂಖ್ಯಾಬಲ ಇರುವ ನಗರಸಭೆಯಲ್ಲಿ ಬಿಜೆಪಿ 32 ಹಾಗೂ ಕಾಂಗ್ರೆಸ್ 3 ಸದಸ್ಯರನ್ನು ಹೊಂದಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…