Featured

ಉಡುಪಿ : ನಗರಸಭೆ ಅನುಮತಿ ಇಲ್ಲದೆ ಭುಜಂಗ ಪಾರ್ಕ್‌ನಲ್ಲಿ ನಾಲ್ಕೈದು ಮರ ಕಡಿದ ಗುತ್ತೀಗೆದಾರ ; 25ಸಾವಿರ ರೂ. ದಂಡ ವಿಧಿಸಿದ ಪೌರಾಯುಕ್ತ – vishwanews24

ಉಡುಪಿ : ನಗರಸಭೆ ಅನುಮತಿ ಇಲ್ಲದೆ ಭುಜಂಗ ಪಾರ್ಕ್‌ನಲ್ಲಿ ನಾಲ್ಕೈದು ಮರ ಕಡಿದ ಗುತ್ತೀಗೆದಾರ ..

25000 ರೂ. ದಂಡ ವಿಧಿಸಿದ ಪೌರಾಯುಕ್ತ

ಉಡುಪಿ: ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ನಗರದ ಭುಜಂಗ ಪಾರ್ಕ್‌ ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡು 25ಸಾವಿರ ರೂ. ದಂಡ ವಿಧಿಸಿದ್ದಾರೆ.

ಪಾರ್ಕ್ ನಲ್ಲಿ ಬೆಳೆದು ನಿಂತ ಮರಗಳನ್ನು ಅಪಾಯಕಾರಿ ಎಂಬ ನೆಲೆಯಲ್ಲಿ ಪಾರ್ಕ್ ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರ ಸುರೇಶ್ ಎಂಬವರ ಸೂಚನೆಯಂತೆ ಕಾರ್ಮಿಕರು ಕಡಿಯುತ್ತಿದ್ದರು. ಇದಕ್ಕೆ ಪಾರ್ಕ್ ನಲ್ಲಿ ವಿಹರಿಸುವ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೂ ಕಾರ್ಮಿಕರು ನಾಲ್ಕೈದು ಮರಗಳನ್ನು ಕಡಿದು ಧರೆಗೆ ಉರುಳಿಸಿದರು. ಮತ್ತೂ ಉಳಿದ ಮರಗಳನ್ನು ಕಡಿಯಲು ಸಿದ್ಧತೆ ಮಾಡುತ್ತಿದ್ದಾಗ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ರಾಯಪ್ಪ ಮರ ಕಡಿಯುವುದನ್ನು ತಡೆದರು.

ಈ ವೇಳೆ ಗುತ್ತಿಗೆದಾರರನನ್ನು ಸ್ಥಳಕ್ಕೆ ಕರೆಸಿ, ಯಾವುದೇ ಅನುಮತಿ ಇಲ್ಲದೇ ಮರ ಕಡಿದಿರುವುದಕ್ಕೆ ತೀವ್ರ ತರಾಟೆಗೆ ತೆಗೆದುಕೊಂಡರು. ಈ ತಪ್ಪಿಗೆ 25 ಸಾವಿರ ರೂ. ದಂಡ ಪಾವತಿಸುವಂತೆ ಮತ್ತು ಒಂದು ಮರದ ಬದಲು 10 ಗಿಡಗಳನ್ನು ನೆಡುವಂತೆ ಗುತ್ತಿಗೆದಾರನಿಗೆ ಪೌರಾಯುಕ್ತರು ಸೂಚಿಸಿದರು.

ಈ ಸಂದರ್ಭದಲ್ಲಿ ಪರಿಸರ ಇಂಜಿನಿಯರ್ ಸ್ನೇಹಾ ಕೆ.ಎಸ್. ಹಾಜರಿದ್ದರು. ಮಾಹಿತಿ ತಿಳಿದು ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago