Featured

ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ : ಯಶ್ ಪಾಲ್ ಸುವರ್ಣ – Vishwanews24

ಉಡುಪಿ ನಗರಸಭೆ ಮಾದರಿಯಲ್ಲಿ ಕಾಪು ಪುರಸಭೆ ಅಭಿವೃದ್ಧಿಗೆ ಬಿಜೆಪಿ ಸಂಕಲ್ಪ : ಯಶ್ ಪಾಲ್ ಸುವರ್ಣ – Vishwanews24

ರಾಜ್ಯದಲ್ಲಿಯೇ ಅತ್ಯುತ್ತಮ ನಗರಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ನಗರಸಭೆಯನ್ನು ಮಾದರಿಯಾಗಿ ಕಾಪು ಪುರಸಭೆಯ ಸರ್ವಾಂಗೀಣ ಅಭಿವೃದ್ದಿಗೆ ಕಾರ್ಯಯೋಜನೆ ರೂಪಿಸುವ ಸಂಕಲ್ಪದೊಂದಿಗೆ ಬಿಜೆಪಿ ಚುನಾವಣೆಯಲ್ಲಿ ಈ ಬಾರಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಉಡುಪಿ ನಗರಸಭೆ ಉಡುಪಿಯ ನವ ನಿರ್ಮಾಣದ ರೂವಾರಿಗಳಾದ ಕೀರ್ತಿಶೇಷ ಡಾ ವಿ ಎಸ್ ಆಚಾರ್ಯ ರವರ ಮಾರ್ಗದರ್ಶನದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಕುಡಿಯುವ ನೀರು, ದಾರಿ ದೀಪ ವ್ಯವಸ್ಥೆ, ತ್ಯಾಜ್ಯ ವಿಲೇವಾರಿ ಘಟಕ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಮಲ್ಪೆ ಬೀಚ್ ನಿರ್ವಹಣೆ, ಕ್ರೀಡಾಂಗಣ, ಮೀನುಗಾರಿಕೆ ಬಂದರು ಸಹಿತ ಸರ್ವಾಂಗೀಣ ಅಭಿವೃದ್ಧಿಯ ರೂಪುರೇಷೆಯೊಂದಿಗೆ ಜನಪರ ಆಡಳಿತ ನಡೆಸುತ್ತಿರುವಂತೆ ಇದೇ ಮಾದರಿಯಲ್ಲಿ ಕಾಪು ಪುರಸಭೆಯಲ್ಲೂ ಸ್ವಚ್ಛ, ಪಾರದರ್ಶಕ ಆಡಳಿತದ ಮೂಲಕ ಬಿಜೆಪಿ ನವ ಕಾಪು ನಿರ್ಮಾಣದ ಕನಸು ನನಸಾಗಿಸಲಿದೆ.

ಪುರಸಭೆ ವ್ಯಾಪ್ತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ದರ್ಜೆ, ಅಗ್ನಿಶಾಮಕ ದಳ ಘಟಕ ಸ್ಥಾಪನೆ, ವೈಜ್ಞಾನಿಕ ಒಳಚರಂಡಿ ವ್ಯವಸ್ಥೆ, ನಾಡದೋಣಿ ಮೀನುಗಾರಿಕೆ ಜೆಟ್ಟಿ ಸ್ಥಾಪನೆ, ಮೀನು ಮಾರ್ಕೆಟ್ ಸಹಿತ ಆಧುನಿಕ ಮಾರುಕಟ್ಟೆ ಪ್ರಾಂಗಾಣ, ಕಾಪು ಬೀಚ್ ಅಭಿವೃದ್ಧಿ ಸಹಿತ ಶೈಕ್ಷಣಿಕ, ಅರೋಗ್ಯ, ತ್ಯಾಜ್ಯ ವಿಲೇವಾರಿ ಮುಂತಾದ ಕಾಪು ನಾಗರೀಕರ ಬಹುದಿನಗಳ ಬೇಡಿಕೆಗೆ ದೂರದೃಷ್ಟಿ ಯೋಜನೆಗಳ ಮೂಲಕ ಜನಪರ ಆಡಳಿತದೊಂದಿಗೆ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಹಕಾರ ದೊಂದಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ಜನಪರ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಬಿಜೆಪಿ ಆದ್ಯತೆ ನೀಡಲಿದೆ.

ಈ ಬಾರಿ ಕಾಪು ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡುಗಳಲ್ಲಿ ಮತದಾರರ ಭಾವನೆ ಬಿಜೆಪಿ ಪರವಾಗಿದ್ದು, ಈ ಬಾರಿ ಕಾಪು ಪುರಸಭೆಯಲ್ಲಿ ಅಧಿಕಾರದ ಚುಕ್ಕಾಣಿಹಿಡಿಯುವ ವಿಶ್ವಾಸ ಹೊಂದಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

18 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

18 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

18 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

19 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

19 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

19 hours ago