ಮಂಗಳೂರು ಮನೆಯಲ್ಲಿ ಕೆ.ಜಿಗಟ್ಟಲೆ ಚಿನ್ನ,ಬೆಳ್ಳಿ ,ಲಕ್ಷಾಂತರ ಹಣ ಪತ್ತೆ.
ಮಂಗಳೂರು : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೂವರು ಅಧಿಕಾರಿಗಳಾದ ಗುರುಪ್ರಸಾದ್ ,ನಯಿಮಾ ಸಯೀದ್, ಪ್ರಸಾದ್ ಸೇರಿ ವಾಣಿಜ್ಯ ಉದ್ದೇಶಕ್ಕೆ ಪರವಾನಿಗೆ ಕೊಡುವುದಕ್ಕಾಗಿ 2.5 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕಛೇರಿ ಮೇಲೆ ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಗುರುಪ್ರಸಾದ್ ಅವರ ಮಂಗಳೂರು ನಗರದ ಕೊಟ್ಟಾರದ ಸಾಗರ್ ಪೊರ್ಟ್ ರೋಡ್ ಬಳಿ ಇರುವ ನಿವಾಸದ ಮೇಲೆ ದಾಳಿ ಮಾಡಲು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಮಂಗಳೂರು ವಿಭಾಗದ ಎಸಿಬಿ ಅಧಿಕಾರಿಗಳ ತಂಡ ಗುರುವಾರ ಸಂಜೆ ದಾಳಿ ಮಾಡಿದ್ದರು ತಡರಾತ್ರಿ 12 ಗಂಟೆವರೆಗೂ ಮನೆಯನ್ನು ಮೂಲೆ ಮೂಲೆ ಪರಿಶೀಲನೆ ನಡೆಸಿದ್ದು ಈ ವೇಳೆ 3.50 ಲಕ್ಷ ರೂಪಾಯಿ ಹಣ , 1 ಕೆ.ಜಿ 200 ಗ್ರಾಂ ಚಿನ್ನ, 5 ಕೆ.ಜಿ.ಬೆಳ್ಳಿ, ಒಂದು ಕಾರು ಪತ್ತೆಯಾಗಿದೆ.
ಮಂಗಳೂರು ಎಸಿಬಿ ಎಸ್ಪಿ ಸಿ.ಎ.ಸೈಮನ್ ,ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ,ಹರಿಪ್ರಸಾದ್,ರಾಧಕೃಷ್ಣ.ಡಿ.ಎ,ರಾಧಕೃಷ್ಣ. ಕೆ,ವೈಶಾಲಿ ,ಆದರ್ಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…