Featured

ಉಡುಪಿ:  ನಗರ ಭಾಗದಲ್ಲಿ ಸಾರ್ವಜನಿಕರ ಸೇವೆಗೆ  ಹೆಚ್ಚುವರಿ ಸರಕಾರಿ ನರ್ಮ್ ಬಸ್ ಮಂಜೂರು ಮಾಡುವಂತೆ ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ:  ನಗರ ಭಾಗದಲ್ಲಿ ಸಾರ್ವಜನಿಕರ ಸೇವೆಗೆ  ಹೆಚ್ಚುವರಿ ಸರಕಾರಿ ನರ್ಮ್ ಬಸ್ ಮಂಜೂರು ಮಾಡುವಂತೆ ಶಾಸಕ ಯಶ್ ಪಾಲ್ ಮನವಿ

ಉಡುಪಿ: ಉಡುಪಿ ನಗರ ಭಾಗದಲ್ಲಿ ಸಾರ್ವಜನಿಕರ ಸೇವೆಗೆ ಹೆಚ್ಚುವರಿ ನರ್ಮ್ ಬಸ್ ಅಗತ್ಯವಿದ್ದು, ಕೊರೊನಾ ಸಂದರ್ಭದಲ್ಲಿ ಸೇವೆಯಿಂದ ಸ್ಥಗಿತಗೊಳಿಸಿರುವ 13 ರೂಟುಗಳ ಬಸ್ ಸೇವೆ ಪುನರಾರಂಭ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಬೆಳಗಾವಿ ಅಧಿವೇಶನದಲ್ಲಿ ಮನವಿ ಮಾಡಿದರು.

ಉಡುಪಿಯಲ್ಲಿ ಸುಮಾರು 9-10 ವರ್ಷಗಳ ಹಿಂದೆ ನರ್ಮ್ ಬಸ್ಗಳ ಓಡಾಟಕ್ಕೆ ಚಾಲನೆ ನೀಡಲಾಗಿದ್ದು ಪ್ರಾರಂಭದಲ್ಲಿ 45 ನರ್ಮ್ ಬಸ್ಗಳು 33 ಮಾರ್ಗಗಳಲ್ಲಿ ಕಾರ್ಯಾಚರಿಸುತ್ತಿದ್ದವು. ಕೊರೋನಾ ಸಂದರ್ಭದಲ್ಲಿ ಈ ಬಸ್ಸುಗಳ ಓಡಾಟ ವನ್ನು ಸಾಂಕ್ರಾಮಿಕ ರೋಗ ಪ್ರಸರಣ ತಡೆಯ ಕಾರಣಕ್ಕಾಗಿ ಮಾರ್ಗಸೂಚಿಯಂತೆ ನಿಲ್ಲಿಸಲಾಗಿತ್ತು. ಕೊರೋನಾ ಬಳಿಕ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ 20 ರೂಟ್ ಗಳಲ್ಲಿ 32 ಬಸ್ಸುಗಳು ಓಡಾಟ ನಡೆಸುತ್ತಿವೆ.

45 ಬಸ್ಸುಗಳ ಮಂಜೂರಾತಿಯು 10 ವರ್ಷಗಳ ಹಿಂದಿನ ಸಮೀಕ್ಷೆಯಂತೆ ಮಂಜೂರಾಗಿದ್ದು, ಈಗಿನ ಬೇಡಿಕೆಯಂತೆ ಸಾರ್ವಜನಿಕರ ಅನುಕೂಲಕ್ಕಾಗಿ ಕನಿಷ್ಠ 80 ನರ್ಮ್ ಬಸ್ಸುಗಳಿಗೆ ಹೆಚ್ಚಿಸಬೇಕಾದ ಅಗತ್ಯವಿದೆ. ಉಡುಪಿ ನಗರದಲ್ಲಿ ಕಾರ್ಯಾಚರಿಸುತ್ತಿರುವ 32 ನರ್ಮ್ ಬಸ್ಸುಗಳು ತೀರಾ ಹಳೆಯ ದಾಗಿದ್ದು, ಆಗಾಗ ಮಾರ್ಗ ಮಧ್ಯೆ ಕೆಟ್ಟು ನಿಲ್ಲುತ್ತಿರುವ ಘಟನೆಗಳು ಸಂಭವಿಸುತ್ತಿದೆ. ಬಸ್ಸುಗಳಿಗೆ ಚಾಲಕರು ಮತ್ತು ನಿರ್ವಾಹಕರ ಕೊರತೆಯೂ ಇದೆ. ಉಡುಪಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಕಾರ್ಮಿಕ ವರ್ಗಕ್ಕೆ ಉತ್ತಮ ಸರಕಾರಿ ಬಸ್ ಸೇವೆ ನೀಡುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಮಂಜೂರು ಮಾಡಿ ಸಹಕರಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಿರುವುದಾಗಿ ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

42 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

52 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

1 hour ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

1 hour ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago