ಉಡುಪಿ: ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು ಅದನ್ನು ನಿಮ್ಮಿಂದ ಕಲಿಯಬೇಕಾಗಿಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲೇಜಿನಲ್ಲಿ ವಸ್ತ್ರ ಸಂಹಿತೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸಮವಸ್ತ್ರ ಕಡ್ಡಾಯ ಮಾಡಿ ಎಂದು ಹೇಳಲು ರಘುಪತಿ ಭಟ್ ಯಾರು? ಎಂದು ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದರು.
ಇದಕ್ಕೆ ಟ್ವೀಟ್ ಮೂಲಕ ಉತ್ತರ ನೀಡಿರುವ ಉಡುಪಿ ಶಾಸಕ ರಘುಪತಿ ಭಟ್ ಅವರು ʼರಘುಪತಿ ಭಟ್ ಯಾರು ಎಂದು ಪ್ರಶ್ನಿಸುವ ಸಿದ್ದರಾಮಯ್ಯ ಅವರೇ ನಾನು ಜನರಿಂದ ಆಯ್ಕೆಯಾದವನು, ನಿಮ್ಮ ಹಾಗೆ ಸ್ವಕ್ಷೇತ್ರದಲ್ಲಿ ಜನರಿಂದ ತಿರಸ್ಕೃತಗೊಂಡು, ಬೇರೆಯವರ ಕ್ಷೇತ್ರದ ಮೇಲೆ ಅವಲಂಬಿತನಾದವನಲ್ಲ. ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು. ಅದನ್ನು ನಿಮ್ಮಿಂದ ಕಲಿಯಬೇಕಿಲ್ಲʼ. ಎಂದು ಹೇಳೀದ್ದಾರೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…