ಉಡುಪಿ: ನನ್ನ ಗೆಲುವಿಗೆ ಸಹಕರಿಸಿದ ಎಲ್ಲಾ ಮತದಾರರಿಗೆ ಕೃತಜ್ಞತೆಗಳು : ಕೋಟ ಶ್ರೀನಿವಾಸ್ ಪೂಜಾರಿ – vishwanews24

Featured, ಉಡುಪಿ

ಉಡುಪಿ: ನನ್ನ ಗೆಲುವಿಗೆ ಸಹಕರಿಸಿದ ಎಲ್ಲಾ ಮತದಾರರಿಗೆ ಕೃತಜ್ಞತೆಗಳು ..

ಬಹಳ ಬೇಗ ಹಿಂದಿ ಇಂಗ್ಲಿಷ್ ಕಲಿಯುತ್ತೇನೆಂಬ ವಿಶ್ವಾಸ ಇದೆ ..

ನಿರೀಕ್ಷೆ ಮಟ್ಟಕ್ಕೆ ಮುಟ್ಟಿಲ್ಲ ಆದರೆ ನಿಶ್ಚಯವಾಗಿ ಎನ್‌ಡಿಎ ಅಧಿಕಾರಕ್ಕೆ ಬರುತ್ತೆ :ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಮುನ್ನಡೆ ಸಾಧಿಸಿರುವ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು, ‘ನಾನು ಬಹಳ ಬೇಗ ಹಿಂದಿ ಇಂಗ್ಲಿಷ್ ಕಲಿಯುತ್ತೇನೆಂಬ ವಿಶ್ವಾಸ ಇದೆ’ ಎಂದು ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನ್ನ ಗೆಲುವಿಗೆ ಸಹಕರಿಸಿದ ಎಲ್ಲಾ ಮತದಾರರಿಗೆ ಕೃತಜ್ಞತೆಗಳು, ಅಹರ್ನಿಷಿ ದುಡಿದ ಕಾರ್ಯಕರ್ತರಿಗೆ ಧನ್ಯವಾದಗಳು. ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬ ಹಂಬಲದಿಂದ ಜನರು ನನಗೆ ಮತ ಹಾಕಿದ್ದಾರೆ. ಎನ್‌ಡಿಎ ಸ್ಪಷ್ಟ ಬಹುಮತ ಪಡೆಯುವ ನಿರೀಕ್ಷೆ ನಮಗೆ ಇತ್ತು. ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಭರವಸೆ ಇತ್ತು. ಎನ್‌ಡಿಎ 295ರ ಆಸು ಪಾಸು ಗೆಲುವು ಪಡೆದಿದೆ. ನಿಶ್ಚಯವಾಗಿ ಎನ್‌ಡಿಎ ಅಧಿಕಾರಕ್ಕೆ ಬರುತ್ತೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ದ.ಕ ಲೋಕಸಭಾ ಚುನಾವಣೆ : ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ -vishwanews24

‘ನಿರೀಕ್ಷೆ ಮಟ್ಟಕ್ಕೆ ಮುಟ್ಟಿಲ್ಲ ನಿಜ. ಉತ್ತರ ಪ್ರದೇಶ ಪಶ್ಚಿಮ ಬಂಗಾಳ ರಾಜಸ್ಥಾನದಲ್ಲಿ ನಾವು ಊಹೆ ಮಾಡಿದ ಪ್ರಮಾಣದಲ್ಲಿ ಗೆಲುವು ಪಡೆದಿಲ್ಲ. ಕೊನೆಯ ಹಂತದಲ್ಲಿ ಇಂಡಿಯಾ ಒಕ್ಕೂಟದವರು ಒಂದು ಲಕ್ಷ ರೂಪಾಯಿ ಕೊಡುವುದಾಗಿ ಹೇಳಿದರು. ಮನೆ ಮನೆಗೆ ಮಾಡಿದ ಪ್ರಚಾರ ಸಾಮಾನ್ಯ ಜನರಲ್ಲಿ ಬದಲಾವಣೆಗೆ ಕಾರಣವಾಗಿರಬಹುದು. ನಿರೀಕ್ಷೆಯ ಮಟ್ಟ ಮುಟ್ಟದಿದ್ದರೂ ಎನ್‌ಡಿಎ ಮತ್ತೊಮ್ಮೆ ಗೆದ್ದಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ 20ಕ್ಕೂ ಅಧಿಕ ಸ್ಥಾನ ಗೆಲ್ಲುವ ಭರವಸೆ ಇತ್ತು. ಸ್ವಲ್ಪ ಕಡಿಮೆ ಇದ್ದೇವೆ. ತುಂಬಾ ಕಡಿಮೆ ಏನೂ ಬಂದಿಲ್ಲ. ಮತ್ತೊಮ್ಮೆ ಎನ್‌ಡಿಎ ಒಕ್ಕೂಟ ವಿಶ್ವಾಸ ಪಡೆದಿದೆ. ಭಾರತಕ್ಕೆ ನರೇಂದ್ರ ಮೋದಿ ತುಂಬಾ ಕೆಲಸ ಮಾಡಿದ್ದಾರೆ. ಬಡವರ ಕಲ್ಯಾಣ ಯೋಜನೆಗಳು ಕೈ ಹಿಡಿದಿವೆ. 370 ರದ್ದು ಮಾಡಿದ್ದು, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಿದ್ದು ಈ ಎಲ್ಲಾ ಘಟನೆಗಳು ಕಣ್ಣಮುಂದೆ ಇದ್ದರೂ ಜನ ಒಂದು ಲಕ್ಷ ರೂಪಾಯಿ ನೀಡುವ ಇಂಡಿಯಾ ಒಕ್ಕೂಟ ಘೋಷಣೆಗೆ ಗಮನ ಸೆಳೆದಿದ್ದಾರೆ. ಇಂಡಿಯಾ ಒಕ್ಕೂಟದ ಈ ತಂತ್ರ ಕೆಲಸ ಮಾಡಿದ್ದು ಸತ್ಯ’ ಎಂದು ಹೇಳಿದರು.

ಹಾಸನ ಲೋಕಸಭಾ ಚುನಾವಣೆ : ಭರ್ಜರಿ ಜಯಭೇರಿ ಬಾರಿಸಿದ ಕಾಂಗ್ರೇಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ – vishwanews24

Leave a Reply