ಉಡುಪಿ: “ನಮೋ” ಎಂದರೆ ನಮಗೆ ಮೋಸ ಎಂದು ಹೇಳಿದ್ದ ಪ್ರಮೋದ್ ಮಧ್ವರಾಜ್ ಅವರು ಇಂದು ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದದ ರಾಜಕಾರಣವನ್ನು ನಡೆಸುತ್ತಿದ್ದಾರೆ. ಕಳೆದ ಬಾರಿ ಖಾಸಗಿ ಪತ್ರಿಕೆಯೊಂದರ ಸಮೀಕ್ಷೆಯಲ್ಲಿ ರಾಜ್ಯಕ್ಕೆ ನಂಬರ್ ಒನ್ ಶಾಸಕನಾಗಿ ಮೂಡಿ ಬಂದರೂ ಬಿಜೆಪಿಯ ಕಾರ್ಯಕರ್ತರು ಸೋಲಿಸಿದ್ದಾರೆ. ನನಗೆ ಕಿಂಚಿತ್ತೂ ಬೇಸರವಿಲ್ಲ. ಮೋದಿಯವರ ಕೈ ಬಲಪಡಿಸಲು ನನ್ನನ್ನು ಸೋಲಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಈ ಮಾತುಗಳು ಇವರ ಅವಕಾಶವಾದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ತಿಳಿಸಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರಿಗೆ ಕಾಂಗ್ರೆಸ್ ಪಕ್ಷವು ಐದು ಭಾರೀ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿತ್ತು. ಹಲವು ಬಾರಿ ಸೋತ ಹೊರತಾಗಿಯೂ ಕಾಂಗ್ರೆಸ್ ಪಕ್ಷ ಅವರ ಕೈ ಬಿಟ್ಟಿರಲಿಲ್ಲ. 2013ರಲ್ಲಿ ಗೆಲುವು ಸಾಧಿಸಿದಾಗ ಅವರನ್ನು ರಾಜ್ಯ ನಾಯಕರನ್ನಾಗಿ ಬೆಳೆಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಅವರಿಗೆ ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ, ಸಚಿವರಾಗಿ, ನಂತರ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಸ್ಥಾನಮಾನ ನೀಡಿತ್ತು. ಕಾಂಗ್ರೆಸ್ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಕಾರ್ಯಕರ್ತರು ಪ್ರಮೋದ್ ಮಧ್ವರಾಜ್ ಅವರ ಗೆಲುವಿಗಾಗಿ ಹಗಲಿರುಳು ದುಡಿದಕ್ಕಾಗಿ ಅವರು ಆ ಸ್ಥಾನಕ್ಕೆ ತಲುಪಲು ಸಾಧ್ಯವಾಯಿತು. ಆದರೆ ಅವರು ಯಾರ ಬಳಿಯೂ ಚರ್ಚಿಸದೇ, ಯಾರ ಬಳಿಯೂ ತಿಳಿಸದೆ, ಅವರ ಗೆಲುವಿಗಾಗಿ ಶ್ರಮಿಸಿದ ನಾಯಕರ ಹಾಗೂ ಕಾರ್ಯಕರ್ತರ ಭಾವನೆಗೆ ಬೆಲಯೂ ಕೊಡದೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುತ್ತಲೇ ಬಂದಿದ್ದಾರೆ.
ಇದೀಗ ಬಿಜೆಪಿಯ ನಾಯಕರನ್ನು, ಬಿಜೆಪಿಯ ಕಾರ್ಯಕರ್ತರನ್ನು ಒಲೈಸಲು, ಬಿಜೆಪಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ. ಇವರ ಈ ಅವಕಾಶವಾದಿ ರಾಜಕಾರಣ ಜನರಿಗೆ ಅರ್ಥವಾಗಿದ್ದು ಮುಂದಿನ ದಿನಗಳಲ್ಲಿ ಜನರೇ ಪ್ರಮೋದ್ ಮಧ್ವರಾಜ್ ಅವರಿಗೆ ಸೂಕ್ತ ಉತ್ತರ ಕೊಡಲಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…