Featured

ಉಡುಪಿ:  ನಮೋ ಎಂದರೆ ನಮಗೆ ಮೋಸ ಎಂದು ಹೇಳಿದ್ದ ಪ್ರಮೋದ್ ಮಧ್ವರಾಜರಿಂದ ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ಅವಕಾಶವಾದಿ ರಾಜಕಾರಣ  : ರಮೇಶ್ ಕಾಂಚನ್ – Vishwanews24

ಉಡುಪಿ: ಪ್ರಮೋದ್ ಮಧ್ವರಾಜ್ ಅವರು ಇಂದು ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದದ ರಾಜಕಾರಣ ನಡೆಸುತ್ತಿದ್ದಾರೆ : ರಮೇಶ್ ಕಾಂಚನ್

ಉಡುಪಿ: “ನಮೋ” ಎಂದರೆ ನಮಗೆ ಮೋಸ ಎಂದು ಹೇಳಿದ್ದ ಪ್ರಮೋದ್ ಮಧ್ವರಾಜ್ ಅವರು ಇಂದು ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದದ ರಾಜಕಾರಣವನ್ನು ನಡೆಸುತ್ತಿದ್ದಾರೆ. ಕಳೆದ ಬಾರಿ ಖಾಸಗಿ ಪತ್ರಿಕೆಯೊಂದರ ಸಮೀಕ್ಷೆಯ‌ಲ್ಲಿ ರಾಜ್ಯಕ್ಕೆ ನಂಬರ್ ಒನ್ ಶಾಸಕನಾಗಿ ಮೂಡಿ ಬಂದರೂ ಬಿಜೆಪಿಯ ಕಾರ್ಯಕರ್ತರು ಸೋಲಿಸಿದ್ದಾರೆ. ನನಗೆ ಕಿಂಚಿತ್ತೂ ಬೇಸರವಿಲ್ಲ. ಮೋದಿಯವರ ಕೈ ಬಲಪಡಿಸಲು ನನ್ನನ್ನು ಸೋಲಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಈ ಮಾತುಗಳು ಇವರ ಅವಕಾಶವಾದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ತಿಳಿಸಿದ್ದಾರೆ.

ಪ್ರಮೋದ್ ಮಧ್ವರಾಜ್ ಅವರಿಗೆ ಕಾಂಗ್ರೆಸ್ ಪಕ್ಷವು ಐದು ಭಾರೀ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿತ್ತು. ಹಲವು ಬಾರಿ ಸೋತ ಹೊರತಾಗಿಯೂ ಕಾಂಗ್ರೆಸ್ ಪಕ್ಷ ಅವರ ಕೈ ಬಿಟ್ಟಿರಲಿಲ್ಲ. 2013ರಲ್ಲಿ ಗೆಲುವು ಸಾಧಿಸಿದಾಗ ಅವರನ್ನು ರಾಜ್ಯ ನಾಯಕರನ್ನಾಗಿ ಬೆಳೆಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಅವರಿಗೆ ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿಯಾಗಿ, ಸಚಿವರಾಗಿ, ನಂತರ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಸ್ಥಾನ‌ಮಾನ ನೀಡಿತ್ತು. ಕಾಂಗ್ರೆಸ್ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಕಾರ್ಯಕರ್ತರು ಪ್ರಮೋದ್ ಮಧ್ವರಾಜ್ ಅವರ ಗೆಲುವಿಗಾಗಿ ಹಗಲಿರುಳು ದುಡಿದಕ್ಕಾಗಿ ಅವರು ಆ ಸ್ಥಾನಕ್ಕೆ ತಲುಪಲು ಸಾಧ್ಯವಾಯಿತು. ಆದರೆ ಅವರು ಯಾರ ಬಳಿಯೂ ಚರ್ಚಿಸದೇ, ಯಾರ ಬಳಿಯೂ ತಿಳಿಸದೆ, ಅವರ ಗೆಲುವಿಗಾಗಿ ಶ್ರಮಿಸಿದ ನಾಯಕರ ಹಾಗೂ ಕಾರ್ಯಕರ್ತರ ಭಾವನೆಗೆ ಬೆಲಯೂ ಕೊಡದೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುತ್ತಲೇ ಬಂದಿದ್ದಾರೆ.

ಇದೀಗ ಬಿಜೆಪಿಯ ನಾಯಕರನ್ನು, ಬಿಜೆಪಿಯ ಕಾರ್ಯಕರ್ತರನ್ನು ಒಲೈಸಲು, ಬಿಜೆಪಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ. ಇವರ ಈ ಅವಕಾಶವಾದಿ ರಾಜಕಾರಣ ಜನರಿಗೆ ಅರ್ಥವಾಗಿದ್ದು ಮುಂದಿನ ದಿನಗಳಲ್ಲಿ ಜನರೇ ಪ್ರಮೋದ್ ಮಧ್ವರಾಜ್ ಅವರಿಗೆ ಸೂಕ್ತ ಉತ್ತರ ಕೊಡಲಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

2 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago