Featured

ಉಡುಪಿ: ‘ನಮ್ಮ ನಡಿಗೆ ಪಂಚಾಯತ್ ಕಡೆಗೆ’ ಪಂಚಗ್ಯಾರಂಟಿ ಯೋಜನೆ ಮಾಹಿತಿ ಕಾರ್ಯಾಗಾರ ಆರಂಭ: ರಮೇಶ್ ಕಾಂಚನ್ – vishwanews24

ಉಡುಪಿ:ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ನಮ್ಮ ನಡಿಗೆ ಪಂಚಾಯತ್ ಕಡೆಗೆ ಕಾರ್ಯಾಗಾರ ಆರಂಭ : ರಮೇಶ್ ಕಾಂಚನ್

ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ರಾಜ್ಯ ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ನಮ್ಮ ನಡಿಗೆ ಪಂಚಾಯತ್ ಕಡೆಗೆ ಎಂಬ ಕಾರ್ಯಕ್ರಮವನ್ನು ವಾರದೊಳಗೆ ಆರಂಭಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

ಉಡುಪಿ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಪಂಚಾಯತ್‌ಗಳಿಗೆ ಭೇಟಿ ನೀಡಿ, ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳನ್ನು ಸೇರಿಸಿ ಮಾಹಿತಿ ಕಾರ್ಯಾಗಾರ ವನ್ನು ನಡೆಸಿ ಯೋಜನೆಗಳ ಮಾಹಿತಿ ನೀಡುವ ಕಾರ್ಯ ಮಾಡಲಾಗುವುದು ಎಂದರು.

ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಭೆಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಯೋಜನಾಧಿಕಾರಿ, ಈ ಯೋಜನೆಯಲ್ಲಿ ಈವರೆಗೆ ಉಡುಪಿ ತಾಲೂಕಿನ ಒಟ್ಟು 765618 ಮಂದಿಗೆ ಒಟ್ಟು 153,12,36000ರೂ. ಹಣ ಪಾವತಿಯಾಗಿದೆ. ಈ ಹಿಂದೆ ಸರಕಾರವೇ ನೇರವಾಗಿ ಹಣ ಬಿಡುಗಡೆ ಮಾಡುತ್ತಿದ್ದು, ಎಪ್ರಿಲ್‌ನಿಂದ ಇಲಾಖೆಯ ಮೂಲಕ ಹಣ ಪಾವತಿ ಮಾಡಲಾಗುತ್ತಿದೆ. ಅದರಂತೆ ಎಪ್ರಿಲ್ ಮತ್ತು ಮೇ ತಿಂಗಳಿಗೆ ಒಟ್ಟು 40,83,93,889ರೂ. ಹಣ ಬಿಡುಗಡೆಯಾಗಿದ್ದು, ಅದರಲ್ಲಿ ಒಟ್ಟು 80498 ಫಲಾನುಭವಿಗಳಿಗೆ 40,54,16,000ರೂ. ವಿತರಿಸಲಾಗಿದೆ. ಉಳಿಕೆ ಹಣವನ್ನು ಮುಂದಿನ ತಿಂಗಳಿಗೆ ಬಳಸಿಕೊಳ್ಳಲಾಗುವುದು ಎಂದರು.

ಗೃಹಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ ನೀಡಿದ ಮೆಸ್ಕಾಂ ಅಧಿಕಾರಿ ಗಣರಾಜ ಭಟ್, ಮೇ ತಿಂಗಳಲ್ಲಿ ಉಡುಪಿ, ಕಲ್ಯಾಣಪುರ ಹಾಗೂ ಮಣಿಪಾಲ ಉಪವಿಭಾಗದಲ್ಲಿ ಒಟ್ಟು 40693 ಮನೆಗಳಿಗೆ 3.86ಕೋಟಿ ರೂ. ಮೊತ್ತ ಉಚಿತ ವಿದ್ಯುತ್ ನೀಡಲಾಗಿದೆ ಎಂದು ತಿಳಿಸಿದರು.ಕೆಎಸ್‌ಆರ್‌ಟಿ ಸಹಾಯಕ ಸಂಚಾರ ನಿರೀಕ್ಷಕ ರವೀಂದ್ರ ಮಾತನಾಡಿ, ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ 10,98,750 ಮಹಿಳೆಯರು ಹಾಗೂ 19ಸಾವಿರ ಮಕ್ಕಳು ಸೇರಿದಂತೆ ಒಟ್ಟು 11.17ಲಕ್ಷ ಮಂದಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಅದಕ್ಕಾಗಿ 4,73,66,593ರೂ. ವ್ಯಯಿಸಲಾ ಗಿದೆ ಎಂದು ಹೇಳಿದರು.

ಯುವನಿಧಿ ಯೋಜನೆಯಡಿ 704 ಮಂದಿ ನೋಂದಾಯಿಸಿಕೊಂಡಿದ್ದು, ಅದರಲ್ಲಿ 588 ಮಂದಿಗೆ ಮೇ ತಿಂಗಳವರೆಗೆ ಒಟ್ಟು 104,11000ರೂ. ಹಣ ನೀಡಲಾಗಿದೆ ಎಂದು ತಿಳಿಸಿದರು. ಯುವನಿಧಿ ಯೋಜನೆ ಬಗ್ಗೆ ಮುಂದಿನ ದಿನಗಳಲ್ಲಿ ಕಾಲೇಜುಗಳಿಗೆ ತೆರಳಿ ಮಾಹಿತಿ ನೀಡುವ ಕಾರ್ಯಾಗಾರವನ್ನು ಹಮ್ಮಿಕೊಳ್ಳ ಲಾಗುವುದು ಎಂದು ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago