ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ರಾಜ್ಯ ಸರಕಾರದ ಪಂಚಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ನಮ್ಮ ನಡಿಗೆ ಪಂಚಾಯತ್ ಕಡೆಗೆ ಎಂಬ ಕಾರ್ಯಕ್ರಮವನ್ನು ವಾರದೊಳಗೆ ಆರಂಭಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.
ಉಡುಪಿ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಪಂಚಾಯತ್‌ಗಳಿಗೆ ಭೇಟಿ ನೀಡಿ, ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳನ್ನು ಸೇರಿಸಿ ಮಾಹಿತಿ ಕಾರ್ಯಾಗಾರ ವನ್ನು ನಡೆಸಿ ಯೋಜನೆಗಳ ಮಾಹಿತಿ ನೀಡುವ ಕಾರ್ಯ ಮಾಡಲಾಗುವುದು ಎಂದರು.
ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಭೆಗೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಭಿವೃದ್ಧಿ ಯೋಜನಾಧಿಕಾರಿ, ಈ ಯೋಜನೆಯಲ್ಲಿ ಈವರೆಗೆ ಉಡುಪಿ ತಾಲೂಕಿನ ಒಟ್ಟು 765618 ಮಂದಿಗೆ ಒಟ್ಟು 153,12,36000ರೂ. ಹಣ ಪಾವತಿಯಾಗಿದೆ. ಈ ಹಿಂದೆ ಸರಕಾರವೇ ನೇರವಾಗಿ ಹಣ ಬಿಡುಗಡೆ ಮಾಡುತ್ತಿದ್ದು, ಎಪ್ರಿಲ್‌ನಿಂದ ಇಲಾಖೆಯ ಮೂಲಕ ಹಣ ಪಾವತಿ ಮಾಡಲಾಗುತ್ತಿದೆ. ಅದರಂತೆ ಎಪ್ರಿಲ್ ಮತ್ತು ಮೇ ತಿಂಗಳಿಗೆ ಒಟ್ಟು 40,83,93,889ರೂ. ಹಣ ಬಿಡುಗಡೆಯಾಗಿದ್ದು, ಅದರಲ್ಲಿ ಒಟ್ಟು 80498 ಫಲಾನುಭವಿಗಳಿಗೆ 40,54,16,000ರೂ. ವಿತರಿಸಲಾಗಿದೆ. ಉಳಿಕೆ ಹಣವನ್ನು ಮುಂದಿನ ತಿಂಗಳಿಗೆ ಬಳಸಿಕೊಳ್ಳಲಾಗುವುದು ಎಂದರು.
ಗೃಹಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ ನೀಡಿದ ಮೆಸ್ಕಾಂ ಅಧಿಕಾರಿ ಗಣರಾಜ ಭಟ್, ಮೇ ತಿಂಗಳಲ್ಲಿ ಉಡುಪಿ, ಕಲ್ಯಾಣಪುರ ಹಾಗೂ ಮಣಿಪಾಲ ಉಪವಿಭಾಗದಲ್ಲಿ ಒಟ್ಟು 40693 ಮನೆಗಳಿಗೆ 3.86ಕೋಟಿ ರೂ. ಮೊತ್ತ ಉಚಿತ ವಿದ್ಯುತ್ ನೀಡಲಾಗಿದೆ ಎಂದು ತಿಳಿಸಿದರು.ಕೆಎಸ್‌ಆರ್‌ಟಿ ಸಹಾಯಕ ಸಂಚಾರ ನಿರೀಕ್ಷಕ ರವೀಂದ್ರ ಮಾತನಾಡಿ, ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ 10,98,750 ಮಹಿಳೆಯರು ಹಾಗೂ 19ಸಾವಿರ ಮಕ್ಕಳು ಸೇರಿದಂತೆ ಒಟ್ಟು 11.17ಲಕ್ಷ ಮಂದಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಅದಕ್ಕಾಗಿ 4,73,66,593ರೂ. ವ್ಯಯಿಸಲಾ ಗಿದೆ ಎಂದು ಹೇಳಿದರು.
ಯುವನಿಧಿ ಯೋಜನೆಯಡಿ 704 ಮಂದಿ ನೋಂದಾಯಿಸಿಕೊಂಡಿದ್ದು, ಅದರಲ್ಲಿ 588 ಮಂದಿಗೆ ಮೇ ತಿಂಗಳವರೆಗೆ ಒಟ್ಟು 104,11000ರೂ. ಹಣ ನೀಡಲಾಗಿದೆ ಎಂದು ತಿಳಿಸಿದರು. ಯುವನಿಧಿ ಯೋಜನೆ ಬಗ್ಗೆ ಮುಂದಿನ ದಿನಗಳಲ್ಲಿ ಕಾಲೇಜುಗಳಿಗೆ ತೆರಳಿ ಮಾಹಿತಿ ನೀಡುವ ಕಾರ್ಯಾಗಾರವನ್ನು ಹಮ್ಮಿಕೊಳ್ಳ ಲಾಗುವುದು ಎಂದು ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…