Featured

ಉಡುಪಿ: ನಮ್ಮ ಸಂವಿಧಾನ ಹಕ್ಕಿಗಾಗಿ ಮುಂದಿನ ಹೋರಾಟ ಮಾಡುತ್ತೇವೆ :   ಹಿಜಾಬ್ ಹೋರಾಟಗಾರ್ತಿಯರು -Vishwanews24

ನಾವು ನಮ್ಮ ಕುರಾನ್ ಫಾಲೋ ಮಾಡುತ್ತೇವೆ.

ನಾವು ಸರಕಾರದ ಆದೇಶ ಅನುಸರಿಸ ಬೇಕಾಗಿಲ್ಲ.

ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ಬೇಕು

ರಾಜ್ಯ ಸರಕಾರದಿಂದ ಕೋರ್ಟ್ ಮೇಲೆ ಒತ್ತಡ ಇದ್ದದ್ದಕ್ಕೆ ಇಂದು ಹಿಜಾಬ್ ವಿರುದ್ಧ ತೀರ್ಪು ಬಂದಿದೆ.

ಉಡುಪಿ, : ನಾವು ನಮ್ಮ ಕುರಾನ್ ಫಾಲೋ ಮಾಡುತ್ತೇವೆ. ನಾವು ಸರಕಾರದ ಆದೇಶ ಅನುಸರಿಸಬೇಕಾಗಿಲ್ಲ. ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ಬೇಕು ಎಂದು ಹಿಜಾವ್ ಹೋರಾಟಗಾರ್ತಿ ಆಲಿಯಾ ಅಸಾದಿ ಹೇಳಿದ್ದಾರೆ.

ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಜಾವ್ ಹೋರಾಟಗಾರ್ತಿಯರು, ನಮ್ಮ ಸಂವಿಧಾನ ಹಕ್ಕಿಗಾಗಿ ಮುಂದಿನ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇತ್ತು. ನಾವು ಹಿಜಬ್ ತೆಗೆದು ತರಗತಿ ಒಳಗೆ ಹೋಗಲ್ಲ. ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಕುರಾನ್ ನಲ್ಲಿ ದೇಹವನ್ನು ಮುಚ್ಚಬೇಕೆಂಬ ಉಲ್ಲೇಖ ಇದೆ. ಹಿಜಾಬ್ ಅವಶ್ಯಕತೆ ಇಲ್ಲದಿದ್ದರೆ ನಾವು ಹಿಜಾಬ್ ತೊಡುತ್ತಿರಲಿಲ್ಲ ಜೊತೆಗೆ ಹೋರಾಟ ಮಾಡುತ್ತಿರಲಿಲ್ಲ ಎಂದರು.

ಹಿಜಾಬ್ ವಿಚಾರವನ್ನು ರಾಜಕೀಯ ಲಾಭಕ್ಕೆ ಕಮ್ಯೂನಲ್ ಮಾಡಲಾಗಿದೆ. ರಾಜಕೀಯ ದುರುದ್ದೇಶದಿಂದ ದೊಡ್ಡ ವಿಷಯವಾಗಿ ಮಾಡಿದರು. ಎಲ್ಲರ ಶಿಕ್ಷಣಕ್ಕೆ ಬಹಳ ಸಮಸ್ಯೆ ಆಗಿದೆ.ನಮಗೆ ಧರ್ಮ ಮತ್ತು ಶಿಕ್ಷಣ ಬಹಳ ಮುಖ್ಯ. ನಮಗೆ ಎರಡೂ ಅವಕಾಶ ಬೇಕು ಎಂದಿದ್ದಾರೆ.

ಸರಕಾರದ ಮಧ್ಯಂತರ ಆದೇಶದ ಮೂಲಕ ಕೋರ್ಟ್ ಮೇಲೆ ಪ್ರೆಶರ್ ಹಾಕಲಾಗಿದೆ. ರಾಜ್ಯ ಸರಕಾರ ಕೋರ್ಟ್ ತೀರ್ಪಿನ ಮೇಲೆ ಹಸ್ತಕ್ಷೇಪ ಮಾಡಿದೆ. ರಾಜ್ಯ ಸರಕಾರದಿಂದ ಕೋರ್ಟ್ ಮೇಲೆ ಒತ್ತಡ ಇದೆ. ಒತ್ತಡ ಇದ್ದದ್ದಕ್ಕೆ ಇಂದು ಹಿಜಾಬ್ ವಿರುದ್ಧ ತೀರ್ಪು ಬಂದಿದೆ. ನಾವು ಕಾಂಪ್ರಮೈಸ್ ಮಾಡಲ್ಲ. ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ನಾವು ಕೋರ್ಟ್‌ಗೆ ಹಿಜಾಬ್ ಗಾಗಿ ಹೋದೆವು. ನಮ್ಮ ನಿರೀಕ್ಷೆ ವಿರುದ್ಧ ತೀರ್ಪು ಬಂದಿದ್ದು, ಸರಕಾರದ ವಸ್ತ್ರಸಂಹಿತೆ ಆದೇಶವನ್ನು ತೀರ್ಪಲ್ಲೇ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.

ಮತ್ತೋರ್ವ ಹೋರಾಟಗಾರ್ತಿ ಅಲ್ಮಾಸ್ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದ್ದಾರೆ. ಅಂಬೇಡ್ಕರ್ ಬದುಕಿದ್ದರೆ ಇಂದು ಕಣ್ಣೀರು ಹಾಕುತ್ತಿದ್ದರು. ಸಂವಿಧಾನದ ಈಗಿನ ಪರಿಸ್ಥಿತಿ ನೋಡಿ ಮರುಗುತಿದ್ದರು ಎಂದಿದ್ದಾರೆ.

ಇನ್ನು ತಮ್ಮ ಮುಂದಿನ ನಡೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾವು ನಮ್ಮ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದೇವೆ. ನಾವು ಈಗಾಗಲೇ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ.ಈಗ ಬಂದ ತೀರ್ಪಿನಿಂದ ನಾವು ಬಹಳ ನೊಂದಿದ್ದೇವೆ ಎಂದು ಹೇಳಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

20 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

20 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

21 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

21 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

21 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago